Yuvavahini

DEC 12, 2025 5.53 AM IST

ಗುರುತತ್ವವಾಹಿನಿ ಮಾಲಿಕೆ 60 ಕಾರ್ಯಕ್ರಮ-ಯುವವಾಹಿನ(ರಿ.)ಬಂಟ್ವಾಳ ಘಟಕ

ದಿನಾಂಕ 20/11/2025 ಶಿಕ್ಷಣ ಮತ್ತು ಸರಳತೆ ನಾರಾಯಣಗುರುಗಳ ಸಮಾಜ ಸುಧಾರಣೆಯ ದ್ವಿಮಂತ್ರ : ಸಂದೀಪ್ ಸಾಲ್ಯಾನ್
ನಾರಾಯಣಗುರುಗಳು ಧಾರ್ಮಿಕತೆಯ ನಿಜವಾದ ಅರ್ಥವನ್ನು ಸಮಾಜಮುಖಿ ಪರಿವರ್ತನೆಯೊಡನೆ ಜೋಡಿಸಿ ನೋಡಿದ ಮಹಾತ್ಮರು. ಧಾರ್ಮಿಕ ತಳಹದಿಯಲ್ಲಿ ಸಮಾಜ ಸುಧಾರಣೆ ಸಾಧ್ಯವೆಂದು ದೃಢವಾಗಿ ನಂಬಿದ ಅವರು, ದೇವಸ್ಥಾನಗಳನ್ನು ಕೇವಲ ಪೂಜಾ ಸ್ಥಳಗಳೆನ್ನದೆ, ಜನರ ಆತ್ಮೋದ್ಧಾರಕ್ಕೆ ದಾರಿಯಾಡಿಸುವ ಪವಿತ್ರ ಕೇಂದ್ರಗಳಾಗಿ ರೂಪಿಸುವ ಕನಸನ್ನು ಕಂಡರು. ದೇವಸ್ಥಾನಗಳು ಅಧ್ಯಯನ, ಜ್ಞಾನಾರ್ಜನೆ ಮತ್ತು ಮೌಲ್ಯಬೆಳೆಸುವ ಸಂಸ್ಕೃತಿಕ ವೇದಿಕೆಗಳಾಗಬೇಕು ಎಂಬುದು ಗುರುಗಳ ಮಹದ್ಭಾವನೆ.
ಉತ್ತಮ ಶಿಕ್ಷಣ ಪಡೆದವರು ಮಾತ್ರ ವೈಚಾರಿಕವಾಗಿ ಚಿಂತನೆ ಮಾಡುವ ಸಾಮರ್ಥ್ಯ ಹೊಂದುತ್ತಾರೆ’ ಎಂಬ ನಂಬಿಕೆಯೊಂದಿಗೆ ನಾರಾಯಣಗುರುಗಳು ಶಿಕ್ಷಣಕ್ಕೆ ಅಪಾರ ಮಹತ್ವ ನೀಡಿದರು. ಆ ಕಾಲದಲ್ಲಿ ಸಮಾಜವು ಎದುರಿಸುತ್ತಿದ್ದ ಅನ್ಯಾಯ, ಅಂಧಶ್ರದ್ಧೆ ಮತ್ತು ಅಸಮಾನತೆಗಳಿಗೆ ಶಿಕ್ಷಣವೇ ಶಾಶ್ವತ ಪರಿಹಾರ ಎಂದು ಅವರು ಆಳವಾಗಿ ಅರಿತಿದ್ದರು. ಸರಳ ಮತ್ತು ಸಾತ್ವಿಕ ಜೀವನವೇ ವ್ಯಕ್ತಿತ್ವದ ನಿಜವಾದ ಅಲಂಕಾರ ಎಂದು ನಾವು ನಾರಾಯಣಗುರುಗಳು ಸಾರಿದರು ಎಂದು ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್ ತಿಳಿಸಿದರು.
ಅವರು ಘಟಕದ ಆಶ್ರಯದಲ್ಲಿ ಅಮ್ಟೂರ್ ಕಿಶೋರ್ ಕಟ್ಟೆಮಾರ್ ನಿವಾಸದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 60ರಲ್ಲಿ ಗುರುಸಂದೇಶ ನೀಡಿದರು.

ಸಭಾ ಕಾರ್ಯಕ್ರಮದ ಮೊದಲು ಯುವವಾಹಿನಿ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು
ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅದ್ಯಕ್ಷರು ಪದಾಧಿಕಾರಿಗಳು,ಸಂಘಟನಾ ಕಾರ್ಯದರ್ಶಿಗಳು ನಿರ್ಧೇಶಕರು ಹಾಗು ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು…
ಸಂಗೀತದಲ್ಲಿ ವಿನಯ್ ಆಚಾರ್ಯ
ಸಾತ್ವಿಕ್ ದೇರಾಜೆ, ಸಹಕರಿಸಿದರು
ಘಟಕದ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!