Yuvavahini

DEC 12, 2025 5.57 AM IST

ಪದಗ್ರಹಣ ಸಮಾರಂಭ-ಯುವವಾಹಿನಿ( ರಿ.) ಮಂಗಳೂರು ಮಹಿಳಾ ಘಟಕ

ದಿನಾಂಕ 22/11/2025 ಯುವವಾಹಿನಿ ಸಭಾಂಗಣ ಶ್ರೀಮತಿ ನೈನಾ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಯೊಂದಿಗೆ ಪ್ರಾರಂಭವಾಯಿತು. ಅಧ್ಯಕ್ಷರು ಬಂದಿರುವ ಎಲ್ಲರನ್ನು ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಅವರು ತನ್ನ ಪ್ರಸ್ತಾವಿಕ ನುಡಿಯಲ್ಲಿ ಯುವವಾಹಿನಿಯ ಮಹಿಳಾ ಘಟಕ ಹಿಂದಿನಿಂದ ಇಂದಿನವರಗೆ ನಡೆದು ಬಂದ ಹಾದಿಯ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು.
ಶ್ರೀಮತಿ ನಮಿತಾ ಶ್ಯಾಮ, ಸಲಹಾ ಸಮಿತಿ ಸದಸ್ಯರು, ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಿ ಅವರು ಘಟಕದ 2024-2025 ರ ವಾರ್ಷಿಕ ವರದಿ ಓದಿದರು. ಚುನಾವಣಾಧಿಕಾರಿಯಾದ ಶ್ರೀಮತಿ ಶುಭ ರಾಜೇಂದ್ರ ಅವರು ನೂತನ ಕಾರ್ಯಕಾರಿ ಸದಸ್ಯರ ವ್ಯಕ್ತಿ ಪರಿಚಯ ನೀಡಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಅವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ಭೋದನೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿರುವ ಶ್ರೀಮತಿ ನಮಿತಾ ಶ್ಯಾಮ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಕೆ ನೀಡಿ ಘಟಕದ ಕಾರ್ಯಕ್ರಮದ ಬಗ್ಗೆ ಹಿತವಚನ ನೀಡಿ ಮುಂದೆಯೂ ಉತ್ತಮ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿರುವ ಶ್ರೀಮತಿ ಶ್ವೇತಾ ಪೂಜಾರಿ ಅವರು ನೂತನ ತಂಡಕ್ಕೆ ಶುಭ ಹಾರೈಸಿ ಹಿತವಚನ ನುಡಿದರು. ಬಳಿಕ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀ ಜೇತೇoದ್ರ ಸುವರ್ಣ ಅವರನ್ನು ಗೌರವಿಸಲಾಯಿತು.
ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ನೀಡಲಾಯಿತು.ಬಳಿಕ ನಿರ್ಗಮನ ಅಧ್ಯಕ್ಷರು ಮಾತನಾಡಿ ಎಲ್ಲಾ ಸದಸ್ಯರಿಗೂ ಘಟಕವನ್ನು ನಡೆಸಲು ಅವಕಾಶ ಸಿಗಬೇಕು ಎಂದು ಸಣ್ಣ ಸಣ್ಣ ಕಾರ್ಯಕ್ರಮ ನಡೆಸಿ ಘಟಕವನ್ನು ಮುನ್ನಡೆಸಲು ಸಾಧ್ಯವಿದೆ ಎಂದು ತಿಳಿಸಿದರು. ನಂತರ ನೂತನ ಅಧ್ಯಕ್ಷರು ಶ್ರೀಮತಿ ಕಸ್ತೂರಿ ಮಹೇಶ್ ಅವರು ತಮಗೆ ಘಟಕದ ಎಲ್ಲಾ ಸದಸ್ಯರ ಸಹಕಾರ ನೀಡಬೇಕೆಂದು ಕೋರಿದರು. ನೂತನ ಕಾರ್ಯದರ್ಶಿ ಶ್ರೀಮತಿ ಸೋನಿಯಾ ರಾಜ್ ಅವರು ಧನ್ಯವಾದ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ಗೋಪಾಲ್ ಅವರು ನಡೆಸಿಕೊಟ್ಟರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!