Yuvavahini

DEC 12, 2025 6.03 AM IST

ಮಹಾಸಭೆ ಮತ್ತು ಯುವ ಬಾಂಧವ್ಯ 2025 ಸಮಾರೋಪ-ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಯುವ ಸಮುದಾಯ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು” .. ನ್ಯಾಯವಾದಿ ಸಂತೋಷ್ ಕುಮಾರ್.
ಯುವಕರು ಸಮಾಜದ ಸಮಸ್ಯೆ, ನೋವುಗಳಿಗೆ ಸ್ಪಂದಿಸುವ ಹಾಗೂ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಆವರ ಮೂಲಕ ಸಂಘಟನೆಗಳ ಉದ್ದೇಶ ಸಾರ್ಥಕವಾಗಬಲ್ಲುದು. ಯುವವಾಹಿನಿ ಸಂಘಟನೆ ತನ್ನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ಪಡೆದಿರುವುದು ಅಭಿನಂದನಾರ್ಹ ಎಂದು ಉಪ್ಪಿನಂಗಡಿಯ ಖ್ಯಾತ ನ್ಯಾಯವಾದಿ ಶ್ರೀ ಸಂತೋಷ್ ಕುಮಾರ್ ತಿಳಿಸಿದರು.

ಅವರು ದಿ.22.11.25 ರಂದು ಬೆಳ್ಳಿಪ್ಪಾಡಿ ಶ್ರೀ ಚಂದ್ರಶೇಖರ ಕೆ ಸನಿಲ್ ರವರ ಮನೆ “ಯಮುನಾ” ದಲ್ಲಿ ನಡೆದ ಘಟಕದ ಮಹಾಸಭೆ ಮತ್ತು ಯುವ ಬಾಂಧವ್ಯ 2025ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡುತ್ತಿದ್ದರು.
ಯುವವಾಹಿನಿ ಸಂಘಟನೆ ಎಲ್ಲಾ ಸಮುದಾಯಗಳ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಪಾಲಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಹಿರೆಬಂಡಾಡಿ ಅಂಚೆ ಸಹಾಯಕರಾದ ಹರೀಶ್ ಪಾಲೆತ್ತಡಿ ಸಂಘಟನೆಯೆಂಬುದು ನಿರಂತರವಾದ ವ್ಯವಸ್ಥೆ, ಅದನ್ನು ಮುನ್ನಡೆಸುವ ಸಾಮರ್ಥ್ಯವನ್ನು ಸದಸ್ಯರು ತೋರಿಸಬೇಕು ಎಂದು ತಿಳಿಸಿದರು.
ಘಟಕದ ಗೌರವ ಸಲಹೆಗಾರರು ಶ್ರೀ ವರದರಾಜ್ ಎಂ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ನಾಣ್ಯಪ್ಪ ಕೋಟ್ಯಾನ್ ವಹಿಸಿದ್ದರು.
ಚುನಾವಣಾಧಿಕಾರಿ ಶ್ರೀ ಸೋಮಸುಂದರ್ ನೂತನ ಕಾರ್ಯಕಾರಿ ಸದಸ್ಯರ ಪಟ್ಟಿ ಪ್ರಕಟಿಸಿದರು.
ಬೆಳ್ಳಿಪ್ಪಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀ ವಸಂತ ಕುಂಡಾಪು ಶುಭ ಹಾರೈಸಿದರು.
ಆತಿಥ್ಯ ವಹಿಸಿದ ಶ್ರೀ ಚಂದ್ರಶೇಖರ ಕೆ ಸನಿಲ್ ದಂಪತಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಬೇಬಿ ಸಾನಿಧ್ಯ ಪ್ರಾರ್ಥಿಸಿದರು.
ಅಧ್ಯಕ್ಷರು ಸ್ವಾಗತಿಸಿದರು, ನಿರ್ದೇಶಕ ರಾಜೀವ ಇಪ್ಪನೋಟ್ಟು ಧನ್ಯವಾದ ಅರ್ಪಿಸಿದರು.ನಿರ್ದೇಶಕ ರಮೇಶ್ ಸಾಂತ್ಯ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!