Yuvavahini

DEC 12, 2025 6.24 AM IST

ಮಕ್ಕಳ ಹಬ್ಬ 2025-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ
ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ
ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶರ್ಮಿಳಾ ಹಾಗೂ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ *ಶ್ರೀಮತಿ ಪೂರ್ಣಿಮ ವಿಧಿತ್ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು ಹಾಗೆಯೇ *ಶ್ರೀಮತಿ ಚೈತ್ರ ಗಣೇಶ್ ಮತ್ತು ಶ್ರೀಮತಿ ಸುಷ್ಮಾ ಸುನಿಲ್ ಕಾರ್ಯಕ್ರಮ ನಿರೂಪಿಸಿದರು

ಸಮಾರೋಪ
ಕಲಾಶ್ರೀ ಮತ್ತು ಕಲಾರತ್ನ* ಪ್ರಶಸ್ತಿ ಪ್ರಧಾನ ಸಮಾರಂಭ

ಘಟಕದ ಸದಸ್ಯರಾದ ಶ್ರೀಮತಿ ಸುಜಾತಾ ಹರೀಶ್ ಮತ್ತು ಶ್ರೀಮತಿ ಸುಗಂಧಿ ಶ್ಯಾಮ್ ಇವರ ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು ಮತ್ತು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.
ಈ ಸಂದರ್ಭ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಯುವವಾಹಿನಿ(ರಿ.)ಕೇಂದ್ರ ಸಮಿತಿ ಮಂಗಳೂರು ಇದರ ದ್ವಿತೀಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್,
ಜ್ಯೋತಿಷ್ಯ ಆಗಮ ಪುರೋಹಿತರಾದ ವೇದಮೂರ್ತಿ ಪಾದೆಬೆಟ್ಟು ರಾಘವೇಂದ್ರ ಆಚಾರ್ಯ, ವಿದ್ಯಾವರ್ಧಕ ಸಂಘ (ರಿ.) ಶಿರ್ವ ಇದರ ಆಡಳಿತಾಧಿಕಾರಿಯಾದ ಪ್ರೊ. ವೈ ಭಾಸ್ಕರ್ ಶೆಟ್ಟಿ, ಬಿಲ್ಲವ ಸಂಘ (ರಿ.) ಪಡುಬಿದ್ರಿ ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶರ್ಮಿಳಾ ಹಾಗೂ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ ವಿಧಿತ್ ಉಪಸ್ಥಿತರಿದ್ದರು.

ಮಕ್ಕಳ ಹಬ್ಬದ ಪ್ರಯುಕ್ತ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೆಯೇ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರಿ ಪ್ರೇಕ್ಷ ಅಮೀನ್, ರಂಜಿತ್ ಅವರಾಲು ಹಾಗೂ ಸುಮಿಶ್ ಸುಕೇಶ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು.

ಹಾಗೆಯೇ ಶ್ರೀಮತಿ ಚಿತ್ರಾಕ್ಷಿ ಹಾಗೂ ಕುಟ್ಟಿ ಕೋಟ್ಯಾನ್ ರವರ ಮಗನಾದ ಶ್ರೀ ಅಭಿಷೇಕ್ ಕೋಟ್ಯಾನ್ ಇವರ ವತಿಯಿಂದ 7 ಜನ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ವಿಭಾಗ 1 ಮತ್ತು ವಿಭಾಗ 2 ರ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 4ನೇ ತರಗತಿಯ ಸಾಕ್ಷಿ ಇವರಿಗೆ ಕಲಾಶ್ರೀ ಮತ್ತು 6ನೇ ತರಗತಿಯ ಅನ್ವಿತ ಮೂಲ್ಯ ಇವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಸಮಾರಂಭದ ಕೊನೆಯಲ್ಲಿ ಘಟಕದ ಕಾರ್ಯದರ್ಶಿ ಶ್ರೀ ಭಾಸ್ಕರ್ ಎನ್ ಅಂಚನ್ ಸರ್ವರಿಗೂ ಧನ್ಯವಾದ ಸಲ್ಲಿಸಿದರು.
ಕುಮಾರಿ ಯಶೋಧ ಪಡುಬಿದ್ರಿ ಮತ್ತು ಹರೀಶ್ ಕೋಟ್ಯಾನ್ ಉಳ್ಳೂರು ಸಮಾರೋಪ ಸಮಾರಂಭದ ನಿರೂಪಣೆ ಗೈದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!