Yuvavahini

DEC 12, 2025 7.18 AM IST

ಗುರುತತ್ವವಾಹಿನಿ ಮಾಲಿಕೆ‌ 59 ಕಾರ್ಯಕ್ರಮ-ಯುವವಾಹಿನಿ(ರಿ.) ಬಂಟ್ವಾಳ ಘಟಕ

ದಿನಾಂಕ – 13/11/2025

ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು
ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ,
ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು.
ನಾರಾಯಣಗುರುಗಳ ಜೀವನವೆಂದರೆ
ಅಜ್ಞಾನದಿಂದ ಜ್ಞಾನಕ್ಕೆ,
ಅಸಮಾನತೆಯಿಂದ ಸಮಾನತೆಗೆ,
ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ ಹೃದಯದೊಳಗೆ ಪ್ರತಿಧ್ವನಿಸುತ್ತಿದೆ ಎಂದು ಶಿಕ್ಷಕಿ, ಬರಹಗಾರ್ತಿ ರೇಣುಕಾ ಕಣಿಯೂರು ತಿಳಿಸಿದರು.ಘಟಕದ ಆಶ್ರಯದಲ್ಲಿ, ಘಟಕದ ಸದಸ್ಯೆ ಮಾರ್ನಬೈಲ್ ಭವಾನಿ ಕೆ ಮತ್ತು ಮಕ್ಕಳ ಆತಿಥ್ಯದಲ್ಲಿ ಸಜಿಪಮೂಡ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 59ರಲ್ಲಿ ಗುರುಸಂದೇಶ ನೀಡಿದರು.
ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಸಜಿಪ ಅನ್ನಪ್ಪಾಡಿ ಬಾಲಗಣಪತಿ ದೇವಸ್ಥಾನದ ಅಧ್ಯಕ್ಷ ಯಶವಂತ ದೇರಾಜೆ,
ಸಜಿಪಮೂಡ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಅಧ್ಯಕ್ಷ ರಮೇಶ್ ಅನ್ನಪ್ಪಾಡಿ. ಉಪಾಧ್ಯಕ್ಷ ತಿಲಕರ ಪೂಜಾರಿ ಕಾರ್ಯದರ್ಶಿ ಅಶ್ವಿನ್ ಪೂಜಾರಿ ಕಾರಾಜೆ ಕೋಶಾಧಿಕಾರಿ ನಾರಾಯಣ ಪೂಜಾರಿ ಕೊಟ್ಟರಿಪಾಲು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಸುಭಾಶ್ ನಗರ. ಶಂಕರ್ ಕಂಸಾಲೆ ಮಹಿಳಾ ಸಮಿತಿ ಅಧ್ಯಕ್ಷೆ ಯೋಗಿನಿ ಉಪಾಧ್ಯಕ್ಷೆ ಹರ್ಷಿಣಿ ಕಾರ್ಯದರ್ಶಿ ನಳಿನಿ ನಿತ್ಯಾನಂದ, ಭಜನಾ ಅಧ್ಯಕ್ಷರು ಲೋಕೇಶ್ ಪೂಜಾರಿ ಪ್ರವೀಣ್ ಪೂಜಾರಿ, ಸದಾಶಿವ ದೇವಸ್ಥಾನ ಈಶ್ವರಮಂಗಿಲ ಅಧ್ಯಕ್ಷ
ಗಿರೀಶ್ ಕುಮಾರ್ ಪೆರ್ವ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು, ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು

ಸಮಾರಂಭದ ಮೊದಲು ಗುರುತತ್ವವಾಹಿನಿ ಭಜನಾ ಸಂಕೀರ್ತನೆ ನಡೆಯಿತು.
ಘಟಕದ ನಿರ್ದೇಶಕ ನಿರ್ದೇಶಕ ಪ್ರಜಿತ್ ಅಮಿನ್ ಏರಮಲೆ ನಿರೂಪಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!