Yuvavahini

DEC 12, 2025 7.22 AM IST

ಮಕ್ಕಳ ದಿನಾಚರಣೆ-ಯುವವಾಹಿನಿ( ರಿ.)ಮುಲ್ಕಿ ಘಟಕ

14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ
ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ
ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.
ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ ಮುಲ್ಕಿ ಘಟಕವು ಒಂದು ಪ್ರತಿಷ್ಟಿತ ಘಟಕವಾಗಿದ್ದು ನಡೆಸುವ ಪ್ರತಿಯೊಂದು ಕಾರ್ಯಕ್ರಮ ಅರ್ಥಪೂರ್ಣ ವಾಗಿರುತ್ತದೆ. ಈ ಬಾಲಿಕಾಶ್ರಮ ಅದೆಷ್ಟೋ ಮಕ್ಕಳಿಗೆ ಆಶ್ರಯವನ್ನು ನೀಡಿದೆ ಮಕ್ಕಳು ಈ ಸಂಸ್ಥೆಯನ್ನು ಮರೆಯದಿರಿ ಎಂದರು.
ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಘಟಕದ ಹಿರಿಯ ಸದಸ್ಯೆ ಸುಲೋಚನ ಜಿ ಅಂಚನ್ ರವರು ಆಶ್ರಮ ದ ಎಲ್ಲಾ ಮಕ್ಕಳಿಗೆ ವಿಶೇಷವಾಗಿ ಬಹುಮಾನ ನೀಡಿದರು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕಾದ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು.ವೇದಿಕೆಯಲ್ಲಿ ಶ್ರೀಮತಿ ನಿರ್ಮಲ ಲೋಕೇಶ್ ಕೋಟ್ಯಾನ್, ಬಾಲಿಕಾಶ್ರಮ ದ ಶ್ರೀಮತಿ ಶಾಂತಿ, ಘಟಕದ ಕಾರ್ಯದರ್ಶಿ ಕು. ಪ್ರೇರಣಾ ಡಿ. ಕಾರ್ಯಕ್ರಮ ನಿರ್ದೇಶಕಿ ಕು. ಯಶಸ್ವಿನಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲು ಮಾಜಿ ಅಧ್ಯಕ್ಷ ಜಯಕುಮಾರ್ ಕುಬೇವೂರು ರವರು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.
ಆಶ್ರಮದ ಮಕ್ಕಳು ಪ್ರಾರ್ಥಿಸಿದರು, ಘಟಕದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ಸ್ವಾಗತಿಸಿದರು, ಕು . ಯಶಸ್ವಿನಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕು. ಪ್ರೇರಣಾ ಡಿ ವಂದಿಸಿದರು ಮಾಜಿ ಅಧ್ಯಕ್ಷ ಸತೀಶ್ ಕಿಲ್ಪಾಡಿ ನಿರೂಪಿಸಿದರು. ನಂತರ ಎಲ್ಲಾ ಮಕ್ಕಳಿಗೆ ವಿಶೇಷ ಭೋಜನ ವಿತರಿಸಲಾಯಿತು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!