Yuvavahini

AUG 05, 2007 10.59 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ.

’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ (ರಿ) ಮಂಗಳೂರು ಇದರ ಉಪಾಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಮಂಗಳೂರು ಇದರ ಸದಸ್ಯರಾಗಿ, ವೀಣಾಪಾಣಿ ಎಜುಕೇಶನ್ ಟ್ರಸ್ಟ್(ರಿ) ಮಂಗಳೂರು ಇದರ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸಕ್ತ “ಕಂಪ್ಯೂಟ್ರಾಕ್ಸ್ ಸರ್ವಿಸ್” ಮಂಗಳೂರು ಇದರ ನಿರ್ದೇಶಕರಾಗಿದ್ದಾರೆ. ಪತ್ನಿ ಶ್ರೀಮತಿ ಪ್ರತಿಭಾ ನೇಮಿರಾಜ್ ಸ್ನಾತಕೋತ್ತರ ಪದವೀಧರೆಯಾಗಿದ್ದು ಎಂ.ಫಿಲ್ ಪದವಿ ಪಡೆದಿರುತ್ತಾರೆ. ಪ್ರಸಕ್ತ ಎಂ.ಬಿ.ಎ. ಅಭ್ಯಾಸ ಮಾಡುತ್ತಿರುವ ಇವರು ಮಂಗಳೂರಿನ ಆದರ್ಶ ಕಾಲೇಜಿನ ಅಧ್ಯಕ್ಷರಾಗಿರುವರು. ಪುತ್ರಿ ನೇಹಲ್ ಮಂಗಳೂರು ಲೂರ್ಡ್ಸ್ ಪದವಿಪೂರ್ವ ಕಾಲೇಜಿನಲ್ಲಿ I PUC ವಿದ್ಯಾರ್ಥಿನಿಯಾಗಿದ್ದು, ಅಂತರ್‌ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಪಟುವಾಗಿರುವ ಬಹುಮುಖ ಪ್ರತಿಭಾವಂತೆ. ಕೂಚಿಪುಡಿ ನೃತ್ಯವನ್ನು ಸ್ಕೇಟಿಂಗ್‌ಗೆ ಅಳವಡಿಸಿ ಪ್ರಸ್ತುತ ಪಡಿಸುವ ಅಪೂರ್ವ ಕಲಾವಿದೆ.

ನೇಮಿರಾಜರ ಅಧ್ಯಕ್ಷ ಅವಧಿಯಲ್ಲಿ ಜರುಗಿದ ಚಟುವಟಿಕೆಗಳು: ವಿದ್ಯೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ ಮತ್ತು ಬಿಲ್ಲವಾಸ್ ದುಬಾಐ ವತಿಯಿಂದ ಕೊಡಲ್ಪಟ್ಟ ದೇಣಿಗೆಗಳನ್ನು ಸಮಾಜದ ಅರ್ಹ ಬಡ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ವಿವಿಧ ಘಟಕಗಳ ಮುಖಾಂತರವೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯ ಸಹಾಯ ಧನವನ್ನು ವಿತರಿಸಲಾಯಿತು. ಯುವಜನತೆಗಾಗಿ ಉಡುಪಿಯ ತರಬೇತಿ ಸಂಸ್ಥೆ ಮತ್ತು ಸ್ವ- ಉದ್ಯೋಗ ಮಾಹಿತಿ ಕೇಂದ್ರದ ವತಿಯಿಂದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಮಟ್ಟದ ಗುರು ಸಂದೇಶ ಜಾಥಾದಲ್ಲಿ ಯುವವಾಹಿನಿ ಸಕ್ರಿಯವಾಗಿ ಭಾಗವಹಿಸಿ ಜಾಥಾ ಮತ್ತು ಸಮಾವೇಶ ಯಶಸ್ವಿಯಾಗುವಲ್ಲಿ ಸಹಕರಿಸಿದೆ.

ವಿಳಾಸ : ತೇಜೋಗ್ರಹ, ಲಾಲ್‌ಬಹದ್ದೂರು ಶಾಸ್ತ್ರಿ ನಗರ, ಕುಲಶೇಖರ ಅಂಚೆ, ಮರೋಳಿ, ಮಂಗಳೂರು – 575005 ಮೊಬೈಲ್: 9448132243

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!