Yuvavahini

AUG 02, 2008 11.06 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ರವಿರಾಜ್ ಕುಮಾರ್ – ಅಧ್ಯಕ್ಷರು -2007-08

ಶ್ರೀಯುತ ಬಿ. ವಾಸು ಮತ್ತು ಶ್ರೀಮತಿ ಕುಸುಮ ದಂಪತಿಯವರ ಸುಪುತ್ರ ಶ್ರೀ ರವಿರಾಜ ಕುಮಾರ್ 10.04.1963 ರಂದು ಉಡುಪಿಯ ಉದ್ಯಾವರದಲ್ಲಿ ಜನಿಸಿದರು. ಬಿ.ಕಾಂ., ಎಲ್.ಎಲ್.ಬಿ ಪದವೀಧರರಾದ ಇವರು ಉಡುಪಿ ಹೃದಯ ಭಾಗದಲ್ಲಿರುವ ಮೈತ್ರಿ ಕಾಂಪ್ಲೆಕ್ಸ್‌ನಲ್ಲಿ ಸ್ವಂತ ಕಛೇರಿಯೊಂದಿಗೆ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಶ್ರೀಯುತರು ಹಲವಾರು ಇನ್ಸೂರೆನ್ಸ್ ಕಂಪೆನಿಗಳಿಗೆ ಸಲಹಾ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷಗಳವರೆಗೆ ಸರಕಾರೀ ಹೆಣ್ಮಕ್ಕಳ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, 1995-2005 ರ ವರೆಗೆ ಸರಕಾರೀ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ದುಡಿದ ಅನುಭವ ಇವರದ್ದು.

ಜಯಂಟ್ಸ್ ಇಂಟರ್ ನೇಶನಲ್ಸ್‌ನ ಉಡುಪಿ ಶಾಖೆ, ಉಡುಪಿ ಉದ್ಯಾವರ ಗಣೇಶೋತ್ಸವ ಸಮಿತಿಯಯಲ್ಲಿ ಅಧ್ಯಕ್ಷರಾಗಿ ದುಡಿದು, ಉಡುಪಿಯ ಜನಪ್ರಿಯ ಸೌಹಾರ್ದ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯಲ್ಲಿ ಕಳೆದ 12 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವರು. ಉದ್ಯಾವರ ಮಂಡಲ ಪಂಚಾಯ್ತಿಯ ಮಾಜಿ ಸದಸ್ಯರಾದ ಶ್ರೀಯುತ ರವಿರಾಜ ಕುಮಾರ್‌ರವರು ಉದ್ಯಾವರ ಬಿಲ್ಲವರ ಮಹಾಜನ ಸಂಘದ ಸಕ್ರಿಯ ಸದಸ್ಯರಾಗಿದ್ದು ಮೂಲ್ಕಿಯ ಬಿಲ್ಲವರ ಮಹಾಮಂಡಲದಲ್ಲಿ ಸದಸ್ಯರಾಗಿರುವರು.

ಯುವವಾಹಿನಿ(ರಿ) ಕೇಂದ್ರ ಸಮಿತಿಯಲ್ಲಿ 2008-09 ನೇ ಸಾಲಿನ ಅಧ್ಯಕ್ಷರಾಗಿ ಸ್ಮರಣೀಯ ಸೇವೆ ಸಲ್ಲಿಸಿರುವರು. ಇವರ ಅಧ್ಯಕ್ಷೀಯ ಅವಧಿಯಲ್ಲಿ ಉಡುಪಿ ಘಟಕದ ದಶಮಾನೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳು ನಡೆದಿದ್ದವು. ರವಿರಾಜ ಕುಮಾರ್‌ರು ಪತ್ನಿ ಜಯಂತಿ ಹಾಗೂ ಪುತ್ರಿಯರಾದ ಕು. ಸ್ವಾತಿ ಮತ್ತು ಕು. ಸ್ವರ್ಣಾ (ಇಬ್ಬರೂ ಇಂಜಿನಿಯರ್ ವಿದ್ಯಾರ್ಥಿಗಳು)ರೊಂದಿಗೆ ಸಂತೃಪ್ತಿ ಜೀವನ ನಡೆಸುತ್ತಿದ್ದಾರೆ.

ವಿಳಾಸ : ಮೈತ್ರಿ ಕಾಂಪ್ಲಕ್ಸ್, ೩ನೇ ಮಹಡಿ, ಸರ್ವಿಸ್ ಬಸ್‌ಸ್ಟ್ಯಾಂಡಿನ ಬಳಿ, ಉಡುಪಿ – 576101
ಮೊಬೈಲ್: 9448104084

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!