ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.


