Yuvavahini

JAN 04, 2026 1.55 PM IST

ಯುವವಾಹಿನಿ (ರಿ.) ಹೆಜಮಾಡಿ ಘಟಕ

ಮನೋರಂಜನಾ ಚಟುವಟಿಕೆಗಳಿಂದ ಸಂಘಟನೆ ಸದೃಢ

ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ ನಾಟಕವು ಹೆಜಮಾಡಿ ಬಿಲ್ಲವರ ಸಂಘದ ಜಯ. ಸಿ. ಸುವರ್ಣ ಸಭಾಗೃಹದಲ್ಲಿ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಕೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಖ್ಯಾತ ನಾಟಕಕಾರ ಹಾಗೂ ಕಲಾವಿದ ದೇವದಾಸ್ ಕಾಪಿಕಾಡ್ ಮತ್ತು ಕೊಡುಗೈ ದಾನಿ ಹಾಗೂ ಹೆಜಮಾಡಿ ಬಿಲ್ಲವರ ಸಂಘದ ಹಿತೈಷಿ ಶಶಿಕುಮಾರ್ ಮಸ್ಕತ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಯುವವಾಹಿನಿ (ರಿ.) ಹೆಜಮಾಡಿ ಘಟಕದ ಅಧ್ಯಕ್ಷ ನಿಶಾಂಕ್ ಎಸ್. ಕೋಟ್ಯಾನ್, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಬಿಲ್ಲವರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಬೋದ್ ಚಂದ್ರ, ಮಹಿಳಾ ಮಂಡಳಿಯ ಅಧ್ಯಕ್ಷ ಲಾವಣ್ಯ ಪ್ರಬೋದ್ ಹಾಗೂ ಬಿಲ್ಲವರ ಸಂಘದ ಮಾಜಿ ಅಧ್ಯಕ್ಷ ಲೋಕೇಶ್ ಅಮೀನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮನೋಹರ್ ಹೆಜಮಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!