Yuvavahini

AUG 14, 2011 11.24 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ ಕಾರ್ಯಗಳಲ್ಲಿಯೂ ಜಾದೂ ಪ್ರದರ್ಶನ ನೀಡಿರುತ್ತಾರೆ.

ಇವರು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು ವಿವಿಧ ಕ್ಷೇತ್ರಗಳ ಸಾಧನೆಗಾಗಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಹಲವು ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿ ಗೌರವಿಸಿವೆ. ಶ್ರೀಯುತರು ಹೇಮಾವತಿಯವರನ್ನು ವಿವಾಹವಾಗಿ ಸೌಮ್ಯ, ಸುಪ್ರಿಯಾ, ಸುಪ್ರಭ ಎಂಬ ಮಕ್ಕಳನ್ನು ಪಡೆದಿರುತ್ತಾರೆ.

ಯುವವಾಹಿನಿ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಇವರು ಯುವವಾಹಿನಿ ಕೇಂದ್ರ ಸಮಿತಿಯಲ್ಲಿ ನಿರ್ದೇಶಕ, ಉಪಾಧ್ಯಕ್ಷ ಹುದ್ದೆಗಳನ್ನು ನಿರ್ವಹಿಸಿ 2010-11 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಮಿತಿಯ ಸ್ವಂತ ಕಛೇರಿ ಆಗಬೇಕೆಂಬ ಬಹುಕಾಲದ ಕನಸು ಇವರ ಅಧ್ಯಕ್ಷತೆಯ ಅವಧಿಯಲ್ಲಿ ನನಸಾಗಿ ಉದ್ಘಾಟನೆಯಾಗಿರುವುದು ಪ್ರಮುಖ ಅಂಶ. ಅಲ್ಲದೆ ಕೇಂದ್ರ ಸಮಿತಿಯ ಸಹಯೋಗದೊಂದಿಗೆ ಮಂಗಳೂರು ಘಟಕದ ಆತಿಥ್ಯದಲ್ಲಿ ಸಭಾ ನಡಾವಳಿ ಮತ್ತು ಯುವವಾಹಿನಿಯ ಕ್ರಮ ನಿಬಂಧನೆಗಳ ಬಗ್ಗೆ ತರಬೇತಿ ಶಿಬಿರ, ಮುಲ್ಕಿ ಘಟಕದ ಆತಿಥ್ಯದಲ್ಲಿ ’ಐಸಿರಿ 2011’ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಹಾಗೂ ಉಡುಪಿ ಘಟಕದ ಆಶ್ರಯದಲ್ಲಿ ಯುವಸಂಪರ್ಕದಲ್ಲೊಂದು ’ನವ ಚಿಗುರು’ ಕಾರ್ಯಕ್ರಮ ನಡೆದಿರುತ್ತದೆ. ಕೇಂದ್ರ ಸಮಿತಿಯ ವಿದ್ಯಾನಿಧಿಯಿಂದ ಲಕ್ಷ ರೂಪಾಯಿಗೂ ಮಿಕ್ಕಿ ವಿದ್ಯಾರ್ಥಿವೇತನ ನೀಡಲಾಗಿದೆ. ಹೆಚ್ಚಿನ ಎಲ್ಲಾ ಘಟಕಗಳು ಕ್ರಿಯಾಶೀಲವಾಗಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಆರೋಗ್ಯ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ನಡೆಸಿವೆ. ಮೂಲ್ಕಿ ಘಟಕದ ತುಳುನಾಡ ವೈಭವದ ಅದ್ದೂರಿಯ ಶತವೈಭವ’ ಕಾರ್ಯಕ್ರಮ ಇವರ ಅಧ್ಯಕ್ಷ ಅವಧಿಯಲ್ಲಿ ನಡೆದಿರುತ್ತದೆ ಮತ್ತು ಈ ಹಿಂದಿನಂತೆ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರುತ್ತದೆ.

ವಿಳಾಸ : ‘ಚೇತನಾ ಕ್ಲಿನಿಕ್’, ಅಂಚೆ ನೆಲ್ಯಾಡಿ, ಪುತ್ತೂರು ತಾಲೂಕು, ದ.ಕ. – 574229. ಫೋನ್ : 08251-254245 (ಆ), 254945 ಸೆಲ್ : 9448124245

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!