Yuvavahini

JAN 04, 2026 7.15 AM IST

ದೈವದಶಕಂ : ಧ್ವನಿಸುರುಳಿ ಬಿಡುಗಡೆ

ಶ್ರೀ ನಾರಾಯಣಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕುದ್ರೋಳಿ ತೀರ್ಥಾಟನಾ ಪ್ರಯುಕ್ತ, ಪೂಜ್ಯ ಬ್ರಹ್ಮಶ್ರೀ ನಾರಾಯಣಗುರುಗಳು ರಚಿಸಿದ ದೈವದಶಕಂ ಕೃತಿಯ ಕನ್ನಡ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮ ಇಂದು ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಕ್ತಿಭಾವಪೂರ್ಣವಾಗಿ ನಡೆಯಿತು.

ಶ್ರೀರಕ್ಷಾ ಎಸ್. ಎಚ್. ಪೂಜಾರಿ ಕೊಣಾಜೆ ಇವರ ಕಂಠಸ್ಪರ್ಶದಲ್ಲಿ ದೈವದಶಕಂನ ದಾರ್ಶನಿಕ ಸಂದೇಶಗಳು ಧ್ವನಿಯಾಗಿ ಮೂಡಿಬಂದ ಈ ಧ್ವನಿ ಸುರುಳಿ, ಆತ್ಮಚಿಂತನೆ, ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ಶ್ರೋತೃಗಳ ಹೃದಯಕ್ಕೆ ತಲುಪಿಸುವ ಪ್ರಯತ್ನವಾಗಿದೆ.ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ,) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಭಾಗವಹಿಸಿದರು. ದೈವದಶಕಂ ಕೇವಲ ಒಂದು ಆಧ್ಯಾತ್ಮಿಕ ಕೃತಿ ಮಾತ್ರವಲ್ಲ; ಅದು ಸಮಾಜದಲ್ಲಿ ಸಮಾನತೆ, ಸಹೋದರತ್ವ ಮತ್ತು ಆತ್ಮಜ್ಞಾನವನ್ನು ಬಿತ್ತುವ ಶಕ್ತಿಯುತ ದಾರ್ಶನಿಕ ಗ್ರಂಥವಾಗಿದ್ದು, ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ಅತಿಥಿಗಳು ಅಭಿಪ್ರಾಯಪಟ್ಟರು ಈ ಸಂದರ್ಭದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಸದಸ್ಯರು, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು

ಭಕ್ತಿಭಾವ, ದಾರ್ಶನಿಕ ಚಿಂತನೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಸಂಗಮವಾಗಿ ನಡೆದ ಈ ದೈವದಶಕಂ ಕನ್ನಡ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮವು, ನಾರಾಯಣಗುರುಗಳ ಸಂದೇಶವನ್ನು ಇಂದಿನ ತಲೆಮಾರಿಗೆ ಹೊಸ ರೂಪದಲ್ಲಿ ತಲುಪಿಸುವ ಮಹತ್ವದ ಪ್ರಯತ್ನವಾಗಿ ಗಮನಸೆಳೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!