Yuvavahini

DEC 30, 2025 7.31 AM IST

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, ಮಾಜಿ ಅಧ್ಯಕ್ಷರುಗಳಾದ ಎಂ.ಕೆ. ಪ್ರಸಾದ್ ಮತ್ತು ಅಶ್ವತ್ ಕುಮಾರ್, ಸದಾಶಿವ ಪೂಜಾರಿ, ಊರ ಸಲಹೆಗಾರ ಸುಧಾಮಣಿ ಆರ್., ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ನೂತನ ಆರೋಗ್ಯ ನಿರ್ದೇಶಕರಾಗಿ ಆಯ್ಕೆಯಾದ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಸೌಮ್ಯ ಲಾಯಿಲಾ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡ ನಿರ್ದೇಶಕ ಜಿತೇಶ್ ಕುಮಾರ್ ಬೆಳ್ತಂಗಡಿ ಅವರನ್ನು ಅಭಿನಂದಿಸಲಾಯಿತು. ಅಲ್ಲದೆ, ಈ ವರ್ಷ ಕೇಂದ್ರ ಸಮಿತಿಯ ಆಶ್ರಯದಲ್ಲಿ ನಡೆದ ಡೆನ್ನಾನ–ಡೆನ್ನನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ “ಯುವ ವೈಭವ–2025” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಘಟಕದ ಕಲಾವಿದರನ್ನು ಗೌರವಿಸಲಾಯಿತು. ಕಾರ್ಯಕ್ರಮದ ನಂತರ ಯುವವಾಹಿನಿ ಕುಟುಂಬ ಸದಸ್ಯರಿಗಾಗಿ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಘಟಕದ ಸದಸ್ಯರಾದ ರತನ್ ಕೋಟ್ಯಾನ್, ಲೀಲಾವತಿ ಪನಕಜೆ ಮತ್ತು ಸಾನ್ವಿ ಅವರುಗಳು ಹಾಡುಗಳನ್ನು ಹಾಡಿ ಸಭಿಕರ ಮನಗೆದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಂತೋಷ್ ಅರಳಿ, ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಬಿ. ಹರೀಶ್ ಕಳಿಯ, ವೇಣೂರು ಘಟಕದ ನಿಕಟಪೂರ್ವ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ಗಣೇಶ್ ಪೂಜಾರಿ ಸಾವ್ಯ, ಕಿಶೋರ್ ಕುಮಾರ್ ಕಲ್ಲಾಪು, ಘಟಕದ ಕೋಶಾಧಿಕಾರಿ ನಾಗೇಶ್ ಆದೇಲೂ, ಸಲಹೆಗಾರ ನಿರಂಜನ್ ಮತ್ತು ಸೇವಂತಿ ನಿರಂಜನ್, ನಿವೃತ್ತ ಯೋಧ ಉಮೇಶ್ ಸೇರಿದಂತೆ ಅನೇಕ ಯುವವಾಹಿನಿ ಕುಟುಂಬ ಸದಸ್ಯರು ಭಾಗವಹಿಸಿದ್ದರು.

ಘಟಕದ ಪ್ರಧಾನ ಕಾರ್ಯದರ್ಶಿ ಮಧುರ ರಾಘವ್ ಸ್ವಾಗತಿಸಿ, ಶ್ರುತ ಮುಂಡೂರು ಕಾರ್ಯಕ್ರಮವನ್ನು ನಿರೂಪಿಸಿ, ಆಕಾಶ್ ಗೇರುಕಟ್ಟೆ ವಂದಿಸಿದರು. ಆತಿಥೇಯರಾದ ಸೌಮ್ಯ ಲಾಯಿಲಾ ಮತ್ತು ಕುಟುಂಬದವರು ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸತ್ಕರಿಸಿದರು. ಕಾರ್ಯಕ್ರಮದ ನಂತರ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!