Yuvavahini

JAN 01, 2026 12.29 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕ ಗುರುತತ್ವವಾಹಿನಿ ಕಾರ್ಯಕ್ರಮ

ನಾರಾಯಣಗುರುಗಳ ಸಂದೇಶ ಸಮಾಜದ ಸಮರಸತೆಗೆ ಪ್ರೇರಣೆ

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು.

ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ ನೀಡಿದರು

ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅರ್ಚಕರಾದ ರಮೇಶ್ ಆಚಾರ್ಯ, ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಮಧ್ವ, ಗೌರವಾಧ್ಯಕ್ಷರಾದ ಶಿವಪ್ಪ ಗೌಡ ನಿನ್ನಿಕಲ್ಲು, ಸುರೇಂದ್ರ ಪೂಜಾರಿ ಮಧ್ವ ನೀರಲ್ಕೆ, ಕೃಷ್ಣ ಕುಲಾಲ್, ಭವಾನಿ ಶ್ರೀಧರ್ , ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮಧ್ವ ನಿರ್ದೇಶಕರಾದ ಧನುಷ್ ಮಧ್ವ ಯಶೋಧರ ಕಡಂಬಲಿಕೆ , ಮಹೇಶ್ ಬೊಳ್ಳಾಯಿ, ಸದಸ್ಯರಾದ ಪ್ರಶಾಂತ್ ಏರಮಲೆ ,ನವೀನ್ ಕುಡ್ಮೇರ್ ,ಯತೀಶ್ ಬೊಳ್ಳಾಯಿ, ಸಹನಾ ಕರ್ಕೇರ ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ. ಶಿವಾನಂದ ಎಂ ನಾಗೇಶ್ ಪೊನ್ನೋಡಿ ಮತ್ತಿತರರು ಉಪಸ್ಥಿತರಿದ್ದರು. ಸಂಗೀತದಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ. ವಿನಯ ಆಚಾರ್ಯ ಸಹಕರಿಸಿದರು

ಯುವವಾಹಿನಿ ಬಂಟ್ವಾಳ ಘಟಕದ ಸಮಾಜ ಸೇವಾ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!