Yuvavahini

JAN 10, 2026 1.09 PM IST

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಮಂಗಳೂರಿನ ಮೂಲ ಮಂತ್ರ : ತಿಪ್ಪಾ ರೆಡ್ಡಿ

ಮಂಗಳೂರು : ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳು, ಸೈಬರ್ ಅಪರಾಧಗಳ ವಿಧಗಳು ಮತ್ತು ಅವುಗಳಿಂದ ರಕ್ಷಿಸಿಕೊಳ್ಳುವ ಮಾರ್ಗಗಳ ಬಗ್ಗೆ ನಾವು ಜಾಗ್ರತರಾಗಬೇಕಿದೆ. ನಶೆಯ ದುಷ್ಪರಿಣಾಮಗಳು ಹಾಗೂ ನಶಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಮಹತ್ವವನ್ನು ತಿಳಿಯಬೇಕಿದೆ. ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜದ ಮೂಲಮಂತ್ರವೆಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ತಿಪ್ಪಾ ರೆಡ್ಡಿ ಇವರು ತಿಳಿಸಿದರು.

ಅವರು ದಿನಾಂಕ 10.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಕಟದ ಆಶ್ರಯದಲ್ಲಿ ಬಿಲ್ಲವ ಬ್ರಿಗೇಡ್ (ರಿ.) ಮಂಗಳೂರು ಇದರ ಸಹಯೋಗದೊಂದಿಗೆ ನಡೆದ ಸೈಬರ್ ಕ್ರೈಂ ಅವರ್ನಸ್ ಹಾಗೂ ನಶೆಮುಕ್ತ ಮಂಗಳೂರು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಂಗಳೂರು ಬಿಲ್ಲವ ಬ್ರಿಗೇಡ್ (ರಿ.) ಸಂಸ್ಥಾಪಕರಾದ ಹಾಗೂ ನಂದಾದೀಪ ಫೌಂಡೇಶನ್ ಅಧ್ಯಕ್ಷರಾದ ಸದಾನಂದ ಪೂಜಾರಿ ಕಾರ್ಯಗಾರ ಉದ್ಘಾಟಿಸಿದರು. ಯುವವಾಹಿನಿ (ರಿ‌.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ರಘುರಾಜ್ ಕದ್ರಿ, ಪೋಲಿಸ್ ಅಧಿಕಾರಿ ಸುರೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಶ್ರೀ ಗೋಕರ್ಣನಾಥೇಶ್ವರ ಕಾಲೇಜ್ , ಬೆಸೆಂಟ್ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದ ಶಾಲೆ ಮಂಗಳೂರು ಇದರ ಒಟ್ಟು 95 ವಿದ್ಯಾರ್ಥಿಗಳು ಬಾಗವಹಿದ್ದರು. ಗೋಕರ್ಣನಾಥೇಶ್ವರ ಕಾಲೇಜಿನ ಉಪನ್ಯಾಸಕರಾದ ಭಾರತಿ, ದಿವ್ಯಾ, ಬೆಸೆಂಟ್ ವಿದ್ಯಾ ಸಂಸ್ಥೆಯ ಶಿಕ್ಷಕಿ ಮಮತಾ, ರಾಜೇಶ್ವರಿ ಉಪಸ್ಥಿತರಿದ್ದರು ಘಟಕದ ಕೋಶಾಧಿಕಾರಿ ಜಯಲಕ್ಷ್ಮಿ ಬಾಲಕೃಷ್ಣ ಪ್ರಾರ್ಥಿಸಿದರು ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮಣಿ ಉಮೇಶ್ ವಂದಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರೇಖಾಲತಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!