ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು.

ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.


