Yuvavahini

DEC 13, 2025 3.20 AM IST

ಯುವವಾಹಿನಿ (ರಿ.) ಬೆಂಗಳೂರು ಘಟಕ

“ಜಾಯ್ ಆಫ್ ಲರ್ನಿಂಗ್ – 2025” ಯುವವಾಹಿನಿ ಸದಸ್ಯರ ಸ್ವಯಂಸೇವೆಯ ಮಹತ್ತರ ಕೊಡುಗೆ

ಬೆಂಗಳೂರು : ದೇವನಹಳ್ಳಿ ಮಕ್ಕಳಧಾಮ ಕ್ಯಾಂಪಸ್‌ನಲ್ಲಿ ಸ್ಪರ್ಶ ಟ್ರಸ್ಟ್ ಆಯೋಜಿಸಿದ್ದ “ಜಾಯ್ ಆಫ್ ಲರ್ನಿಂಗ್ – 2025” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ನಿಸ್ವಾರ್ಥ ಸೇವೆಯ ಮೂಲಕ ಸಮಾಜಮುಖಿ ಬದ್ಧತೆಯನ್ನು ಮೆರೆದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವಕಾಶವಂಚಿತ ಮಕ್ಕಳಿಗೆ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆತ್ಮವಿಶ್ವಾಸ, ಉತ್ಸಾಹ ಮತ್ತು ಬದುಕಿನ ಹೊಸ ಆಶಯ ತುಂಬುವ ಮಹತ್ವದ ಪ್ರಯತ್ನ ನಡೆಯಿತು.

ಡಿಸೆಂಬರ್ 13ರಂದು ಕಬಡ್ಡಿ, ವಾಲಿಬಾಲ್, ತ್ರೋಬಾಲ್, ರಿಲೇ, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಯುವವಾಹಿನಿ ಸದಸ್ಯರು ತೀರ್ಪುಗಾರರು ಹಾಗೂ ಸ್ವಯಂಸೇವಕರಾಗಿ ಸಕ್ರಿಯವಾಗಿ ಪಾಲ್ಗೊಂಡು ಸ್ಪರ್ಧೆಗಳ ಯಶಸ್ವಿ ನಿರ್ವಹಣೆಗೆ ಕಾರಣರಾದರು.

ಡಿಸೆಂಬರ್ 14ರಂದು ಮಕ್ಕಳಿಗಾಗಿ ಬುಕ್ ರೀಡಿಂಗ್, ಕಥೆ ಹೇಳುವಿಕೆ, ಕ್ವಿಜ್, ಭಾಷಣ, ಹಾಡು ಮತ್ತು ನೃತ್ಯ ಸೇರಿದಂತೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಯಿತು. ಈ ಎಲ್ಲಾ ಸ್ಪರ್ಧೆಗಳ ಸಂಯೋಜನೆ, ಮಕ್ಕಳ ಮಾರ್ಗದರ್ಶನ ಮತ್ತು ಶಿಸ್ತಿನ ವ್ಯವಸ್ಥೆಯಲ್ಲಿ ಯುವವಾಹಿನಿ ಸದಸ್ಯರು ಅಪಾರ ಶ್ರಮ ವಹಿಸಿದರು.

ಈ ಮಹತ್ವದ ಕಾರ್ಯಕ್ರಮಕ್ಕೆ ಯುವವಾಹಿನಿ ಅಧ್ಯಕ್ಷರೂ ಹಾಗೂ ಸ್ಪರ್ಶ ಟ್ರಸ್ಟ್ ಸಮಿತಿ ಸದಸ್ಯರೂ ಆಗಿರುವ ಶಶಿಧರ ಕೋಟ್ಯಾನ್ ಅವರು ಸಂಪೂರ್ಣ ನೇತೃತ್ವ ವಹಿಸಿದ್ದರು. ಅವರು ಕಳೆದ 15 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಿರಂತರವಾಗಿ ಮುನ್ನಡೆಸುತ್ತಿದ್ದು, 2010ರಲ್ಲಿ ಕೇವಲ 100 ಮಕ್ಕಳಿಂದ ಆರಂಭವಾದ ಈ ಕಾರ್ಯಕ್ರಮ ಇಂದು 1000ಕ್ಕಿಂತ ಹೆಚ್ಚು ಮಕ್ಕಳ ಭಾಗವಹಿಸುವಿಕೆಯಿಂದ ರಾಜ್ಯಮಟ್ಟದ ಸಾಮಾಜಿಕ ಚಳವಳಿಯಾಗಿ ಬೆಳೆದಿದೆ. ಕಾರ್ಯಕ್ರಮದಲ್ಲಿ ಯುವವಾಹಿನಿ ಮಾಜಿ ಅಧ್ಯಕ್ಷರಾದ ಶ್ರೀಧರ್ ಡಿ. ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದು, ಮಕ್ಕಳಿಗೆ ಪ್ರೋತ್ಸಾಹ ಮತ್ತು ಸ್ಫೂರ್ತಿ ನೀಡಿದರು. ಯುವವಾಹಿನಿ ಸದಸ್ಯರ ನಿಸ್ವಾರ್ಥ ಸೇವೆ, ಸಮಯ ಮತ್ತು ಶ್ರಮ ಈ ಕಾರ್ಯಕ್ರಮದ ಯಶಸ್ಸಿಗೆ ಭದ್ರವಾದ ಆಧಾರವಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಯುವವಾಹಿನಿ ತನ್ನ ಪ್ರಾಮಾಣಿಕ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇಂತಹ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಯುವವಾಹಿನಿ ಸದಸ್ಯರ ಉತ್ಸಾಹಭರಿತ ಭಾಗವಹಿಸುವಿಕೆ ಮುಂದೆಯೂ ನಿರಂತರವಾಗಿ ಮುಂದುವರಿಯಲಿ ಎಂಬುದು ಎಲ್ಲರ ಹಾರೈಕೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!