Yuvavahini

JAN 03, 2026 4.09 AM IST

ಯುವವಾಹಿನಿ (ರಿ) ಕಾರ್ಕಳ ಘಟಕ

ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ

ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು ಹೊಂದಿರುವುದಾಗಿ ತಿಳಿಸಿದರು. ಯುವವಾಹಿನಿ ಕಾರ್ಕಳ ಘಟಕ ಗುರು ಸಂದೇಶ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದ್ದು, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಈ ಘಟಕವು ಮಾದರಿ ಸಂಘಟನೆಯಾಗಿ ರೂಪುಗೊಂಡಿದೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಯುವವಾಹಿನಿ ಘಟಕದ ಅಧ್ಯಕ್ಷ ದಯಾನಂದ ಯು. ಕರ್ಕೇರ ಅವರು ಭಾಗವಹಿಸಿ, ನಾರಾಯಣ ಗುರುಗಳ ಸರಳ ಜೀವನ, ಉನ್ನತ ಚಿಂತನೆ ಹಾಗೂ ಸಮಾಜ ಸುಧಾರಣೆಯ ಹಾದಿಯನ್ನು ನೈಜ ಘಟನೆಗಳ ಮೂಲಕ ವಿವರಿಸಿದರು. ನಾರಾಯಣ ಗುರು ಮಂದಿರಗಳು ಪೂಜೆಗೆ ಮಾತ್ರ ಸೀಮಿತವಾಗದೆ, ಗುರುಗಳ ತತ್ವ ಸಂದೇಶವನ್ನು ಸಮಾಜಕ್ಕೆ ಸಾರುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಘಟಕದ ಪೂರ್ವಾಧ್ಯಕ್ಷ ತಾರನಾಥ್ ಕೋಟ್ಯಾನ್, ಬಿಲ್ಲವ ಸಂಘದ ಪ್ರಮುಖರಾದ ಸುಭಿತ್ ಎನ್.ಆರ್. ಹಾಗೂ ರತ್ನಾಕರ ವರಂಗ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಗದೀಶ್ ಪೂಜಾರಿ ಸೇನರಬೆಟ್ಟು, ಸಾಣೂರು ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಘಟಕದ ಕಾರ್ಯದರ್ಶಿ ರಾಕೇಶ್ ಅಮೀನ್, ಪೂರ್ವಾಧ್ಯಕ್ಷರಾದ ಸುಧಾಕರ ಪೂಜಾರಿ, ಮಮತಾ ಅಂಚನ್, ಅರುಣ್ ಪೂಜಾರಿ ಮಾಂಜ ಮೊದಲಾದವರು ಉಪಸ್ಥಿತರಿದ್ದರು. ಶೇಖರ್ ಸುವರ್ಣ ನಕ್ರೆ ಅವರು ಗುರು ಪೂಜೆಯನ್ನು ನೆರವೇರಿಸಿದರು ಹಾಗೂ ಸನ್ನಿಧಿ ಪ್ರಾರ್ಥಿಸಲಾಯಿತು.

ಗುರುತತ್ವ ಪ್ರಚಾರ ನಿರ್ದೇಶಕ ಸಂದೇಶ್ ಕೋಟ್ಯಾನ್ ಅವರು ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮದ ಆಶಯವನ್ನು ವಿವರಿಸಿದರು. ಘಟಕದ ಅಧ್ಯಕ್ಷ ಪ್ರಕಾಶ್ ಪೂಜಾರಿ ಅವರು ಸ್ವಾಗತಿಸಿದರು. ಚೈತ್ರ ಕಬ್ಬಿನಾಲೆ ಅವರು ಕಾರ್ಯಕ್ರಮವನ್ನು ಸುಸೂತ್ರವಾಗಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!