Yuvavahini

JAN 13, 2026 7.59 AM IST

ಯುವವಾಹಿನಿ (ರಿ) ಕಡಬ ಘಟಕ

ವಿದ್ಯಾಸ್ಪೂರ್ತಿ ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು : ಅಶೋಕ್ ಕುಮಾರ್ ಪಡ್ಪು

ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು.

ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆದ ತರಬೇತಿ ಕಾರ್ಯಾಗಾರ ವಿದ್ಯಾಸ್ಪೂರ್ತಿ ಉದ್ಘಾಟಿಸಿ ಮಾತನಾಡಿದರು

ವಿದ್ಯಾಸ್ಪೂರ್ತಿ ಕಾರ್ಯಾಗಾರವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಉದ್ಘಾಟಿಸಿದರು

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾದ ಉಮೇಶ್ ಬಳ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು

ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೇಂಜಿ , ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಸಂಚಾಲಕರಾದ ಫಾದರ್ ಪ್ರಕಾಶ್ ಪೌಲ್ ಡಿಸೋಜ, ಸಮಾಜ ಸೇವಕರಾದ ಡಾ. ರವಿ ಕಕ್ಕೆಪದವು, ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ ಪ್ರಧಾನ ಸಂಚಾಲಕರಾದ ಸತೀಶ್ ಕೆ ಐತ್ತೂರು ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಜಯರಾಮ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು

ಶಿಕ್ಷಕರು ಹಾಗೂ ರಾಜ್ಯಮಟ್ಟದ ವಿಕಾಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಾಗಾರ ನಡೆಸಿಕೊಟ್ಟರು, ಕಡಬ ತಾಲೂಕಿನ ಹತ್ತು ವಿದ್ಯಾಸಂಸ್ಥೆಗಳ ಒಟ್ಟು 400 ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದರು

ವಿದ್ಯಾಸ್ಪೂರ್ತಿ ಕಾರ್ಯಾಗಾರದಲ್ಲಿ ಭಾಗವಹಿಸಿದ 400 ಕ್ಕೂ ಅಧಿಕ ವಿದ್ಯಾರ್ಥಿಗಳು

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಗಣ, ಜಯರಾಮ ಪುತ್ತೂರು ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಉದಯ ಕೋಲಾಡಿ, ಉಪಸ್ಥಿತರಿದ್ದರು, ಯುವವಾಹಿನಿ ಕಡಬ ಘಟಕದ ವಿದ್ಯಾನಿಧಿ ನಿರ್ದೇಶಕ ಹರ್ಷಿತ್ ಮಾಯಿಲ್ಗ ಸ್ವಾಗತಿಸಿದರು, ಕಾರ್ಯದರ್ಶಿ ಸತೀಶ್ ಕೊರಪ್ಪಣೆ ಧನ್ಯವಾದ ನೀಡಿದರು ಮಾಜಿ ಅಧ್ಯಕ್ಷ ಕೃಷ್ಣಪ್ಪ ಅಮೈ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!