Yuvavahini

JAN 11, 2026 3.46 AM IST

ಯುವವಾಹಿನಿ (ರಿ) ಕಂಕನಾಡಿ ಘಟಕ

ಯುವವಾಹಿನಿ ಕಂಕನಾಡಿ ಘಟಕದಿಂದ ಕಿರು ಪ್ರವಾಸ

ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್‌ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು.

ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು.

ಪ್ರಯಾಣದ ವೇಳೆ ಬೋಟಿನ ಸಿಬ್ಬಂದಿಗಳಿಂದ ವಿವಿಧ ಮನರಂಜನಾ ಆಟೋಟ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, ವಿಜೇತರಾದವರಿಗೆ ಘಟಕದ ಅಧ್ಯಕ್ಷರು ಬಹುಮಾನ ವಿತರಿಸಿದರು. ಬಗೆಯಬಗೆಯ ತಿಂಡಿ–ತಿನಸುಗಳನ್ನು ಸವಿಯುತ್ತ, ಸುಮಧುರ ಸಂಗೀತ ರಸಮಂಜರಿಯೊಂದಿಗೆ ಹಾಡು–ನೃತ್ಯಗಳಲ್ಲಿ ಭಾಗವಹಿಸಿ ಸದಸ್ಯರು ಸಂಭ್ರಮದಿಂದ ಕಾಲ ಕಳೆಯುವಂತಾಯಿತು. ಮಧ್ಯಾಹ್ನ ಭರ್ಜರಿ ಭೋಜನದ ನಂತರ ಹೌಸಿ–ಹೌಸಿ ಆಟವನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ನಗದು ಬಹುಮಾನಗಳನ್ನು ನೀಡಲಾಯಿತು. ಸಾಯಂಕಾಲದ ಚಹಾದೊಂದಿಗೆ ಈ ಒಂದು ದಿನದ ಕಿರು ಪ್ರವಾಸವು ಸಮರ್ಪಕವಾಗಿ ಮುಕ್ತಾಯಗೊಂಡಿತು. ಈ ಕಿರು ಪ್ರವಾಸದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಸೇರಿ ಒಟ್ಟು ಸುಮಾರು 100 ಮಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!