
ಕಾರ್ಕಳ: ದಿನಾಂಕ 14.01.2025 ರಂದು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ, ಕಾರ್ಕಳದಲ್ಲಿ ಆಯೋಜಿಸಲಾದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹಿರಿಯರಾದ ಭಾಸ್ಕರ್ ಕೋಟ್ಯಾನ್ ಇರುವತ್ತೂರು ಅವರನ್ನು ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮಿನ್, ಘಟಕದ ಪೂರ್ವಾಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಎಲ್ಲಾ ವ್ಯವಸ್ಥಾಪನಾ ಹಾಗೂ ಸೇವಾ ಕಾರ್ಯಗಳಲ್ಲಿ ಯುವವಾಹಿನಿ ಕಾರ್ಕಳ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಮಹತ್ವದ ಸಹಕಾರ ನೀಡಿದರು


