Yuvavahini

JAN 19, 2026 1.00 PM IST

ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಅರಿವು 2026

ಯುವವಾಹಿನಿ ಸಕಾರಾತ್ಮಕ ಬದಲಾವಣೆಯ ಪ್ರೇರಕ ಶಕ್ತಿ : ಜಗದೀಶ್ಚಂದ್ರ ಡಿ ಕೆ

ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ ಕೆ ಹೇಳಿದರು.

ಯುವವಾಹಿನಿ ವೇಣೂರು ಘಟಕದ ಆಶ್ರಯದಲ್ಲಿ ದಿನಾಂಕ 19.01.2025ರಂದು ವೇಣೂರು ಲಯನ್ಸ್ ಕ್ಲಬ್‌ನಲ್ಲಿ ನಡೆದ ಅರಿವು -2026 ಮಾರ್ಗದರ್ಶಿ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಬಿರ ನಡೆಸಿಕೊಟ್ಟರು
ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ವೇಣೂರು ಘಟಕದ. 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಗಾರದ ಪ್ರಯೋಜನ ಪಡೆದರು
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ಮೂಡುಬಿದ್ರಿ, ಶುಭಕರ ಪೂಜಾರಿ ಸಾವ್ಯ, ಸಮಾಜ ಸೇವಾ ನಿರ್ದೇಶಕ ನಿತೀಶ್ ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಯುವವಾಹಿನಿ ವೇಣೂರು ಘಟಕದ ಕಾರ್ಯದರ್ಶಿ ದಕ್ಷ ಅಂಬಲ ಅಂಡಿ0ಜೆ ಧನ್ಯವಾದ ನೀಡಿದರು, ಸಲಹೆಗರಾದ ಅರುಣ್ ಕೋಟ್ಯಾನ್ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!