ವೇಣೂರು :ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ದಿನಾಂಕ 18.01.2026ರ ಆದಿತ್ಯವಾರ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷರಾದ ರಾಕೇಶ್ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಘಟಕದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಂಘಟನಾ ಕಾರ್ಯದರ್ಶಿಗಳು ಉಪಸ್ಥಿತರಿದ್ದು ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಪರಿಸರ ಸ್ವಚ್ಛತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


