Yuvavahini

JAN 03, 2026 11.00 PM IST

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು.

ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುತ್ತಾ ಸಂಜೆ ಸುರಕ್ಷಿತವಾಗಿ ತಮ್ಮ ತಮ್ಮ ಮನೆಗಳಿಗೆ ಮರಳಿದರು. ಈ ಪ್ರವಾಸದಲ್ಲಿ ಘಟಕದ ಸದಸ್ಯರು, ಅವರ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಭಾಗವಹಿಸಿದ್ದು, ಪರಸ್ಪರ ಆತ್ಮೀಯತೆಯನ್ನು ಹೆಚ್ಚಿಸಿಕೊಂಡು ಸಂಘಟನಾ ಬಾಂಧವ್ಯವನ್ನು ಬಲಪಡಿಸಿದರು. ಕಾರ್ಯಕ್ರಮವು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಸಂಪನ್ನವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!