Yuvavahini

JAN 18, 2026 1.00 PM IST

ಯುವವಾಹಿನಿ (ರಿ)ಸುರತ್ಕಲ್ ಘಟಕದ ಪದಗ್ರಹಣ ಸಮಾರಂಭ ‘ಸಾರಥ್ಯ–2026

ಪ್ರತಿ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿದ ನಾಯಕತ್ವವನ್ನು ಅರಳಿಸುವುದು ಯುವವಾಹಿನಿಯ ಸಂಕಲ್ಪ : ಅಶೋಕ್ ಕುಮಾರ್ ಪಡ್ಪು

ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು ಯುವವಾಹಿನಿಯ ಮೂಲ ಉದ್ದೇಶವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು.

ಅವರು ದಿನಾಂಕ 18.01.2026ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಮಾರಂಭ ಸಾರಥ್ಯ–2026 ರಲ್ಲಿ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕುಳಾಯಿ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೇಶವ ಸುವರ್ಣ ಅವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಒಂದು ವರುಷದ ಸಾಧನೆ ಹಾಗೂ ಕಥೆ, ಕವನ, ಲೇಖನಗಳನ್ನು ಒಳಗೊಂಡ ಚಿಲುಮೆ ಕಿರು ಹೊತ್ತಗೆಯನ್ನು ವಕೀಲರು ಮತ್ತು ನೋಟರಿ ಶ್ರೀಧರ ಎಣ್ಮಕಜೆ ಬಿಡುಗಡೆಗೊಳಿಸಿದರು ಹಾಗೂ ಚಿಲುಮೆ ಸಂಪಾದಕ ಅಶೋಕ್ ಕುಮಾರ್ ಉಪಸ್ಥಿತರಿದ್ದರು
ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಪಿ ದಯಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಸನಿಲ್ ಹಾಗೂ ನೂತನ ನಿಯೋಜಿತ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವ ಅಭಿನಂದನೆ
ಅಂತರ್ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಹಾಗು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರ ಸಾಧನೆಯನ್ನು ಗುರುತಿಸಿ ಗೌರವ ಅಭಿನಂದನೆ ಸಮರ್ಪಿಸಲಾಯಿತು. ಡಿಸೆಂಬರ್ 14 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ನಡೆದ ಘಟಕದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಮಾಡಲಾಯಿತು ಮತ್ತು ಕ್ರೀಡಾಕೂಟದ ಸಂಚಾಲಕರಾದ ರವಿಚಂದ್ರ ವಿಜೇತರನ್ನು ಸಭೆಗೆ ಪರಿಚಯಿಸಿದರು

ಪದಗ್ರಹಣ :
2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿಯ ಸದಸ್ಯರನ್ನು ಆಯ್ಕೆ ಸಮಿತಿಯ ಸಂಚಾಲಕರದ ಅಶೋಕ್ ಕುಮಾರ್ ಸಭೆಗೆ ಪರಿಚಯಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮತ್ತು ನೂತನ ತಂಡಕ್ಕೆ ಶುಭಾಶಯಗಳನ್ನು ತಿಳಿಸಿದರು.
ಸುರತ್ಕಲ್ ಘಟಕದ ವತಿಯಿಂದ ಕುಳಾಯಿ ನಾರಾಯಣ ಗುರು ಮಂದಿರದ ದೀಪದ ಪೀಠವನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಮುಂದಿನ ಒಂದು ವರ್ಷದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸದಸ್ಯರ ಸಹಕಾರದಿಂದ ಯುವವಾಹಿನಿ ಸುರತ್ಕಲ್ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸ ಇದೆ ಎಂದು ನೂತನ ನಿಯೋಜಿತ ಅಧ್ಯಕ್ಷರಾದ ರೇವತಿ ನವೀನ್, ತಿಳಿಸಿದರು ಹಾಗೂ ಕೋಶಾಧಿಕಾರಿಯಾಗಿ ಅಮಿತ ದಿಲೀಪ್ ಆಯ್ಕೆಯಾದರು.
ಘಟಕದ ಸದಸ್ಯರು ಹಾಗೂ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ದಿವಿತ್ ಕುಮಾರ್ 2025-26 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಯುವವಾಹಿನಿ ಸುರತ್ಕಲ್ ಘಟಕದ ಆದ್ಯ ಅವರು ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಸಂಚಾಲಕರು ಹಾಗೂ ನೂತನ ಕೋಶಾಧಿಕಾರಿ ಅಮಿತ ದಿಲೀಪ್ ಅವರ ಧನ್ಯವಾದ ನೀಡಿದರು.ಮಾಜಿ ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ಹಾಗೂ ತಾರಾ ಅಶೋಕ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!