Yuvavahini

JAN 19, 2026 4.00 PM IST

ಯುವವಾಹಿನಿ (ರಿ.) ಪಣಂಬೂರು–ಕುಳಾಯಿ

ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಕ್ಕಳಿಗೆ ಜಾಗೃತಿ

ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. ಜೊತೆಗೆ ಸೈಬರ್ ಕ್ರೈಂ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿ, ಇಂತಹ ಅಪರಾಧಗಳಿಂದ ದೂರವಿರುವ ವಿಧಾನಗಳು ಹಾಗೂ ಕಾನೂನಿನ ಕೆಲವು ಮುಖ್ಯ ಕಾಯ್ದೆಗಳ ಕುರಿತು ಮಾಹಿತಿಯನ್ನು ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ, ಯುವವಾಹಿನಿ ಘಟಕದ ಸದಸ್ಯರೂ ಹಾಗೂ ಪರಿಸರ ಪ್ರೇಮಿಯಾಗಿರುವ ನಾಗರಾಜ್ ಬಜಾಲ್ ಅವರು, ಮನೆ ಹಾಗೂ ಶಾಲೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವ ಮಹತ್ವವನ್ನು ವಿವರಿಸಿದರು. ಕಸವನ್ನು ಹಸಿಕಸ ಮತ್ತು ಒಣಕಸವಾಗಿ ವಿಂಗಡಿಸುವ ವಿಧಾನ, ಪರಿಸರ ಸಂರಕ್ಷಣೆಯಲ್ಲಿ ಮರಗಳ ಪಾತ್ರ ಹಾಗೂ ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಬದುಕುವ ಅಗತ್ಯತೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಘಟಕದ ಅಧ್ಯಕ್ಷರಾದ ಸುನಿಲ್ ಸಾಲ್ಯಾನ್ ಅವರು ಅತಿಥಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಯುವವಾಹಿನಿ ಘಟಕದ ವತಿಯಿಂದ ಭಟ್ಟರಾಂಡ್ ರಶೆಲ್ ಶಾಲೆಗೆ ವಾಲಿಬಾಲ್ ಮತ್ತು ತ್ರೋಬಾಲ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಅತಿಥಿಗಳಿಗೆ ಪರಿಸರ ಸ್ನೇಹಿ ಗಿಡಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಸುನಿಲ್ ಸಾಲ್ಯಾನ್, ಕಾರ್ಯದರ್ಶಿ ಸಂದೀಪ್ ಕೋಟ್ಯಾನ್, ಪ್ರಥಮ ಹಾಗೂ ದ್ವಿತೀಯ ಉಪಾಧ್ಯಕ್ಷರು, ಕೋಶಾಧಿಕಾರಿ, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಕೊನೆಯಲ್ಲಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!