Yuvavahini

JAN 22, 2026 9.00 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

“ಗುರು ಸ್ಮರಣೆ – 2026”

ಉಪ್ಪಿನಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ನಕ್ಷತ್ರ ಶತಭಿಷ ದಿನವಾದ 22.01.2026ರ ಗುರುವಾರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ಬಜತ್ತೂರು ಬಿಲ್ಲವ ಗ್ರಾಮ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಗುರು ಸ್ಮರಣೆ – 2026” ಭಜನಾ–ಸಂಕೀರ್ತನಾ ಕಾರ್ಯಕ್ರಮ ನಡೆಯಿತು

ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಹಾಗೂ ಗ್ರಾಮ ಸಮಿತಿಯ ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಭಕ್ತಿಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಗುರು ಮಂದಿರದ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಹಾಗೂ ಘಟಕದ ಗೌರವ ಸಲಹೆಗಾರರಾದ ವರದರಾಜ್ ಎಂ., ಗುರು ಮಂದಿರದ ಸದಸ್ಯರಾದ ಮಾಧವ ಸಾಲ್ಯಾನ್ ಮುಂಡೂರು, ಮೋಹನ್ ತೆಂಕಿಲ, ಮಾಜಿ ಕಾರ್ಯನಿರ್ವಹಣಾಧಿಕಾರಿ ಉದಯ ಕೋಲಾಡಿ, ಘಟಕದ ಮಾಜಿ ಅಧ್ಯಕ್ಷರುಗಳಾದ ರವೀಂದ್ರ ದಲ್ಕಾಜೆ, ಕೃಷ್ಣಪ್ಪ ಪೂಜಾರಿ, ಕುಶಾಲಪ್ಪ ಹತ್ತುಕಳಸೆ, ಡಾ. ಆಶಿತ್ ಎಂ.ವಿ., ಚಂದ್ರಶೇಖರ್ ಕೆ., ಸನಿಲ್ ಸೋಮಸುಂದರ್ ಕೊಡಿಪ್ಪಾನ, ನಾಣ್ಯಪ್ಪ ಕೋಟ್ಯಾನ್ ಹಾಗೂ ಘಟಕದ ಉಪಾಧ್ಯಕ್ಷರುಗಳಾದ ಅಂಕಿತ್ ಎಂ.ಜೆ., ಲಕ್ಷ್ಮೀಶ ನಿಡ್ಡೆಂಕಿ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಜತ್ತೂರು ಗ್ರಾಮ ಸಮಿತಿಯ ಅಧ್ಯಕ್ಷರಾದ ಸೋಮಸುಂದರ್ ಅವರು ಎಲ್ಲರನ್ನು ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ರಮೇಶ್ ಸಾಂತ್ಯ ಅವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!