ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) ಪಡುಬಿದ್ರಿ ಘಟಕಕ್ಕೆ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ, ಯುವವಾಹಿನಿ (ರಿ.) ಅಡ್ವೆ ಘಟಕದ ಸ್ಥಾಪಕ ಅಧ್ಯಕ್ಷರಾದ ನಿತೇಶ್ ಜೆ.ಕೆ., ಮಾಜಿ ಅಧ್ಯಕ್ಷರಾದ ಅರುಣಾನಂದ ಕಿಶೋರ್, ಟೈಟಲ್ ಸಾಂಗ್ ರಚಿಸಿದ ಶರತ್ ಅಡ್ವೆ, ಪಡುಬಿದ್ರಿ ಘಟಕದ ಕಾರ್ಯದರ್ಶಿ ಭಾಸ್ಕರ್ ಎನ್. ಅಂಚನ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಿತ್ ಪೂಜಾರಿ ಕರ್ನಿರೆ ಅವರು ಎಲ್ಲರನ್ನು ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಯಶೋಧ ಪಡುಬಿದ್ರಿ ಅವರು ನಿರ್ವಹಿಸಿದರು.


