Yuvavahini

JAN 25, 2026 11.00 AM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ

ಅಂಚೆ ಜನ ಸಂಪರ್ಕ ಅಭಿಯಾನ‌ ಶಿಬಿರ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜನವರಿ 28ರಂದು ಆಯೋಜಿಸಲಾಯಿತು

ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪು
ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ತಿಳಿಸಿದರು.

ಈ ಸಂದರ್ಭದಲ್ಲಿ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾಜ ಸೇವಾ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ತಿಳಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ನಡೆದ ಶಿಬಿರದಲ್ಲಿ ಒಟ್ಟು 529 ಶಿಬಿರಾರ್ಥಿಗಳು ಆಧಾರ್ ತಿದ್ದುಪಡಿ ನೊಂದಣಿ ಹಾಗೂ ಅಂಚೆ ಇಲಾಖೆಯ ವಿಮಾ ಸೌಲಭ್ಯಗಳ ಪ್ರಯೋಜನ ಪಡೆದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!