Yuvavahini

JAN 25, 2026 9.00 PM IST

ಯುವವಾಹಿನಿ (ರಿ.) ಕಡಬ ಘಟಕ

ಮನೆ–ಮನೆ ಭಜನೆ

ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಭಜನಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ನಾರಾಯಣ ಗುರುಗಳ ಭಜನೆಯ ಮೂಲಕ ಧಾರ್ಮಿಕ ಜಾಗೃತಿ ಹಾಗೂ ಸಾಮಾಜಿಕ ಸಂಪರ್ಕವನ್ನು ಗಟ್ಟಿಗೊಳಿಸುವ ಯುವವಾಹಿನಿಯ ಬದ್ಧತೆಯನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಸಾಬೀತುಪಡಿಸಿತು.
ಈ ಸಂದರ್ಭದಲ್ಲಿ ಭಜನೆಯಲ್ಲಿ ಪಾಲ್ಗೊಂಡ ಎಲ್ಲಾ ಯುವವಾಹಿನಿ ಸದಸ್ಯರಿಗೆ ಐದು ಮನೆಗಳ ಕುಟುಂಬಸ್ಥರು ಧನ್ಯವಾದಗಳನ್ನು ಸಲ್ಲಿಸಿದರು. ಇದೇ ವೇಳೆ ಘಟಕದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆಗಳನ್ನು ತಿಳಿಸಿ, ನಾರಾಯಣ ಗುರುಗಳ ಆಶೀರ್ವಾದ ಸದಾ ಎಲ್ಲರ ಮೇಲೂ ಇರಲಿ ಎಂದು ಹಾರೈಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!