Yuvavahini

JAN 25, 2026 1.00 PM IST

ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ “ಮಾಹಿತಿ ಕಾರ್ಯಾಗಾರ – 2k26”

ಜವಾಬ್ದಾರಿಯ ಅರಿವೇ ಸಂಘಟನೆಯ ಶಕ್ತಿ : ಜಗದೀಶ್‌ಚಂದ್ರ ಡಿ.ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳಿಗೆ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಉದ್ದೇಶದಿಂದ “ಮಾಹಿತಿ ಕಾರ್ಯಾಗಾರ – 2k26” ಕಾರ್ಯಕ್ರಮವನ್ನು ದಿನಾಂಕ 25.01.2026ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಉದ್ದೇಶ, ಘಟಕಗಳ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ–ಕರ್ತವ್ಯಗಳು ಮತ್ತು ಸಂಘಟನೆಯಲ್ಲಿ ಸದಸ್ಯರ ಪಾತ್ರದ ಮಹತ್ವದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದಾಗ ಸಂಘಟನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತದೆ ಎಂದರು. ಕಾರ್ಯಾಗಾರವನ್ನು ಗೌರವ ಸಲಹೆಗಾರರಾದ ವರದರಾಜ ಎಂ. ಅವರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪಸ್ಥಿತರಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ಕಡಬ ಅವರು ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಎಲ್ಲರನ್ನು ಸ್ವಾಗತಿಸಿ ಅತಿಥಿಗಳನ್ನು ಗೌರವಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕಿ ವನಿತಾ ಕೃಷ್ಣಪ್ಪ ಪೂಜಾರಿ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವನ್ನು ಜೊತೆ ಕಾರ್ಯದರ್ಶಿ ನಯನಾ ಮನೋಹರ್ ಅವರು ನಿರೂಪಿಸಿದರು. ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್, ಸೋಮ ಸುಂದರ್, ಜನಾರ್ದನ ಪೂಜಾರಿ, ಕೃಷ್ಣಪ್ಪ ಪೂಜಾರಿ ಹಾಗೂ ನಾಣ್ಯಪ್ಪ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!