Yuvavahini

JAN 25, 2026 8.30 PM IST

ಯುವವಾಹಿನಿ ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಮತ್ತು ಪ್ರತಿಭಾ ಪುರಸ್ಕಾರ

ಹಿರಿಯರ ಮಾರ್ಗದರ್ಶನವೇ ದಾರಿದೀಪ : ಅಶೋಕ್ ಕುಮಾರ್ ಪಡ್ಪು

ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು ದಿಕ್ಕುತಪ್ಪುವ ಅಪಾಯವಿದೆ. ಸಂಘಟನೆ ಎಂದರೆ ಕೇವಲ ಚಟುವಟಿಕೆಗಳಲ್ಲ; ಮುಳುಗುತ್ತಿರುವವರನ್ನು ಮೇಲಕ್ಕೆತ್ತುವ ಸೇವಾ ಮನೋಭಾವವೂ ಆಗಬೇಕು” ಎಂದು ಅಭಿಪ್ರಾಯಪಟ್ಟರು.

ಹತ್ತು ವರ್ಷಗಳ ಪಯಣದಲ್ಲಿ ಕಂಕನಾಡಿ ಘಟಕವು ಕೇಂದ್ರ ಸಮಿತಿಯ ಅತ್ಯಂತ ಸಕ್ರಿಯ ಹಾಗೂ ಕ್ರಿಯಾಶೀಲ ಘಟಕಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯೆಂದು ಅವರು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಸಮಾಜ ಸೇವೆಯ ಇನ್ನಷ್ಟು ಆಯಾಮಗಳಿಗೆ ಕೈಹಾಕುವಂತೆ ಶುಭ ಹಾರೈಸಿದರು.
ವಿನೋದ್ ಕುಮಾರ್ ದೀಪ ಬೆಳಗಿಸುವ ಮೂಲಕ ದಶಮಾನೋತ್ಸವ ಸಂಭ್ರಮ ಉದ್ಘಾಟಿಸಿದರು. . ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಸುರೇಖಾ ಮೋಹನ್ ಅವರು ಮಾತನಾಡಿ, ದಶಮಾನೋತ್ಸವದ ಈ ಸಂಭ್ರಮಕ್ಕೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ, ಯುವವಾಹಿನಿ ಕಂಕನಾಡಿ ಘಟಕವು ಕ್ಷೇತ್ರದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಸಕ್ರಿಯವಾಗಿ ಕೈಜೋಡಿಸಿರುವುದಲ್ಲದೆ, ಜೀರ್ಣೋದ್ದಾರ ಕಾರ್ಯಕ್ಕೂ ತನು–ಮನ–ಧನ ಸಹಾಯ ನೀಡಿರುವುದು ಶ್ಲಾಘನೀಯ ಎಂದರು. ಶ್ರೀ ವರಿ ಫೈನಾನ್ಸ್ ಸಂಸ್ಥೆಯ ಮಾಲಕರಾದ ಅರುಣ್ ಪೂಜಾರಿ ಎಕ್ಕೂರು ಅವರು ಮುಖ್ಯ ಅತಿಥಿಗಳಾಗಿ ಶುಭ ಹಾರೈಕೆ ಮಾಡಿದರು.

ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ :
ಹತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂರು ಸಾಧಕರಿಗೆ ಸನ್ಮಾನ, ಹಾಗೂ ಕಳೆದ ಹತ್ತು ವರ್ಷಗಳಲ್ಲಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಘಟಕದ ಘನತೆಯನ್ನು ಹೆಚ್ಚಿಸಿದ ಘಟಕದ ಮಾಜಿ ಅಧ್ಯಕ್ಷರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.
ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಇಂದಿರಾ ಬಿ. ಅವರು ಮಾತನಾಡಿ, ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಸಂಘಟನೆಯೊಂದಿಗೆ ಸಂಪರ್ಕ ಬೆಳೆಸಬೇಕು. ಜೊತೆಗೆ ಘಟಕದ ಸದಸ್ಯರು ಸಮಾಜದ ಇನ್ನಷ್ಟು ಬಂಧುಗಳನ್ನು ಯುವವಾಹಿನಿಗೆ ಕರೆತಂದು ಸಂಘಟನೆಯನ್ನು ಬಲಪಡಿಸಬೇಕೆಂದು ಕರೆ ನೀಡಿದರು. ಸಮಾರಂಭದ ವಿಶೇಷ ಘಟ್ಟದಲ್ಲಿ ಘಟಕದ ಬೆಳವಣಿಗೆಗೆ ಮಾರ್ಗದರ್ಶಕರಾಗಿ ಸಹಕರಿಸಿದ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಕೇಶ್ ಕುಮಾರ್, ಹಾಗೂ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಅವರನ್ನು ಗೌರವಿಸಲಾಯಿತು.

ಸ್ಥಾಪಕ ಅಧ್ಯಕ್ಷ ಶೇಖರ್ ಅಮೀನ್ ಯುವವಾಹಿನಿ ಕಂಕನಾಡಿ ಘಟಕವು ನಡೆದು ಬಂದ ಹಾದಿಯನ್ನು ಪ್ರಸ್ತಾವನೆ ಮೂಲಕ ಮೆಲುಕು ಹಾಕಿದರು. ಘಟಕದ ಹಿರಿಯ ಸದಸ್ಯೆ ಪ್ರೇಮಾ ಅವರು ಪ್ರಾರ್ಥನೆಯ ಮೂಲಕ ಸಮಾರಂಭಕ್ಕೆ ಪಾವನತೆ ನೀಡಿದರು, ಘಟಕದ ಕಾರ್ಯದರ್ಶಿ ಧನುಷ್ ಧನ್ಯವಾದ ನೀಡಿದರು , ಕಾರ್ಯಕ್ರಮದ ನಿರೂಪಣೆಯನ್ನು ಮೇಘಾ ಹಾಗೂ ವೀಣಾ ಬಿ.ಕೆ. ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!