Yuvavahini

JAN 27, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ ಸಾರಥ್ಯ- 2026

ಯುವವಾಹಿನಿಯಿಂದ ಸಾಮಾಜಿಕ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನ : ಡಾ.ಸದಾನಂದ ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.
ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾನಿಧಿ ಯೋಜನೆಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಒದಗಿಸುವುದರ ಜೊತೆಗೆ, ಸಮಾಜದ ವಿವಿಧ ವರ್ಗಗಳೊಂದಿಗೆ ಸಂಪರ್ಕ ಸಾಧಿಸಿ ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಕಾರ್ಯವನ್ನು ಯುವವಾಹಿನಿ ನಿರಂತರವಾಗಿ ನಡೆಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಕಿರಣ್ ಕೋಡಿಕಲ್ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸಂಘಟನಾ ಕಾರ್ಯವೈಖರಿಯಲ್ಲಿ ಸಮಯ ಪಾಲನೆ ಮತ್ತು ಶಿಸ್ತು ಪ್ರಮುಖ ಸ್ಥಾನ ಪಡೆದಿದ್ದು, ಪ್ರತಿಯೊಂದು ಕಾರ್ಯಕ್ರಮವೂ ನಿಗದಿತ ವೇಳಾಪಟ್ಟಿಯಂತೆ ಸುಸೂತ್ರವಾಗಿ ನಡೆಯುವುದು ಸಂಸ್ಥೆಯ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ. ಯುವಕರಲ್ಲಿ ಸಮಯದ ಮೌಲ್ಯ ಹಾಗೂ ಶಿಸ್ತುಬದ್ಧ ಬದುಕಿನ ಅರಿವು ಮೂಡಿಸುವಲ್ಲಿ ಯುವವಾಹಿನಿಯ ಕ್ರಮಗಳು ಮಾದರಿಯಾಗಿದೆ ಎಂದು ಹೇಳಿದರು.

2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಗೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿ ಮಾತನಾಡಿದ ಹರೀಶ್ ಕೆ. ಸುವರ್ಣ, ಹಿರಿಯರ ಮಾರ್ಗದರ್ಶನ ಮತ್ತು ಸದಸ್ಯರ ಸಹಕಾರದೊಂದಿಗೆ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು. ನಿಕಟಪೂರ್ವ ಅಧ್ಯಕ್ಷರಾದ ನಾಗೇಶ್ ಅಮೀನ್ ಮುಲ್ಲಕಾಡು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್, ಆಯ್ಕೆ ಸಮಿತಿಯ ಸಂಚಾಲಕರಾದ ನಾಗೇಶ್ ಅಮೀನ್ ಮುಲ್ಲಕಾಡು, ಕಾರ್ಯದರ್ಶಿ ಯಶವಂತ್ ಪೂಜಾರಿ, ನೂತನ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ, ಯುವಸಿಂಚನ ಕಾರ್ಯನಿರ್ವಾಹಕ ಸಂಪಾದಕರಾದ ಹರೀಶ್ ವಿ. ಪಚ್ಚನಾಡಿ, ಡಾಕ್ಟರೇಟ್ ಪದವಿ ಪಡೆದ ಘಟಕದ ಸದಸ್ಯೆ ಭಾರತಿ, ಸ್ಕೌಟ್ಸ್ ಅಂಡ್ ಗೈಡ್ಸ್ ಸಾಧಕಿ ಪೂರ್ಣಿಮಾ ಅವರನ್ನು ಅಭಿನಂದಿಸಲಾಯಿತು.

ಸಮಾರಂಭದ ಮೊದಲು ಭಜನೆ, ಗುರುಪೂಜೆ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಿತು. ಕಾರ್ಯದರ್ಶಿ ಯಶವಂತ್ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. ನೂತನ ಕಾರ್ಯದರ್ಶಿ ಉಷಾ. ಕೆ. ಧನ್ಯವಾದ ಸಮರ್ಪಣೆ ಮಾಡಿದರು. ಘಟಕದ ಸದಸ್ಯರಾದ ಸತೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!