Yuvavahini

JAN 26, 2026 8.00 AM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋಭೂಮಿ ಶಿವಗಿರಿ ಕ್ಷೇತ್ರ ದರ್ಶನ

ಕೊಲ್ಯ : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋಭೂಮಿ ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ ಭಕ್ತಿಭಾವ, ಶಿಸ್ತು ಹಾಗೂ ಆತ್ಮೀಯತೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.
ಒಟ್ಟು 54 ಯಾತ್ರಾರ್ಥಿಗಳನ್ನು ಒಳಗೊಂಡ ತಂಡವು ದಿನಾಂಕ 23-01-2026 ಶುಕ್ರವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರದತ್ತ ಪ್ರಯಾಣ ಆರಂಭಿಸಿತು. ದಿನಾಂಕ 24-01-2026 ಶನಿವಾರ ಬೆಳಿಗ್ಗೆ ನಿತ್ಯಕರ್ಮಗಳನ್ನು ಪೂರೈಸಿ ಶಿವಗಿರಿ ಮಠದಲ್ಲಿ ಗುರುಪೂಜೆ ಸಲ್ಲಿಸಿ, ಗುರುಗಳು ಹಾಗೂ ಶಾರದಾ ಮಾತೆಯ ಅನುಗ್ರಹ ಪಡೆದು ಬೆಳಗಿನ ಉಪಹಾರವನ್ನು ಸ್ವೀಕರಿಸಲಾಯಿತು. ಬಳಿಕ ಗುರುಗಳ ಜನ್ಮಸ್ಥಳ ಚೆಂಬಳತಿಗೆ ತೆರಳಿ, ಮಧ್ಯಾಹ್ನ ಕುನ್ನುಪಾರಂ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಹಾಪೂಜೆಯಲ್ಲಿ ಭಾಗವಹಿಸಿ, ನಂತರ ಮಠದಲ್ಲಿ ಅನ್ನಪ್ರಸಾದ ಸೇವಿಸಲಾಯಿತು.

ಸಂಜೆ ಕನ್ಯಾಕುಮಾರಿ ತಲುಪಿ ಬೋಟಿಂಗ್ ಮೂಲಕ ವಿವೇಕಾನಂದ ರಾಕ್ ವೀಕ್ಷಣೆ ಮಾಡಿ, ಅಲ್ಲಿನ ಕಡಲ ಆರ್ಭಟ ಹಾಗೂ ತಂಗಾಳಿಯ ಸವಿಯೊಂದಿಗೆ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲಾಯಿತು. ನಂತರ ಕನ್ಯಾಕುಮಾರಿ ದೇವಿ ಹಾಗೂ ದೇವಿಯ ಮೂಗುತಿ ದರ್ಶನ ಪಡೆದು, ರಾತ್ರಿ 8.30ಕ್ಕೆ ಮರುತ್ವಮಲೆ ಆಶ್ರಮದಲ್ಲಿ ಭೋಜನ ಸ್ವೀಕರಿಸಿ ವಿಶ್ರಾಂತಿ ಪಡೆಯಲಾಯಿತು.
ದಿನಾಂಕ 25-01-2026 ಭಾನುವಾರ ಬೆಳಿಗ್ಗೆ 5.30ಕ್ಕೆ ಮಠದಲ್ಲಿ ನಡೆದ ಸತ್ಸಂಗದಲ್ಲಿ ಭಾಗವಹಿಸಿ ಗುರುಪೂಜೆ ಸಲ್ಲಿಸಲಾಯಿತು. ಬಳಿಕ 6.00 ಗಂಟೆಗೆ ಗುರುಗಳು ತಪಸ್ಸು ಮಾಡಿದ ಮರುತ್ವಮಲೆ ಬೆಟ್ಟಕ್ಕೆ ಯಾತ್ರಾರ್ಥಿಗಳು ಉತ್ಸಾಹದಿಂದ ಪಾದಯಾತ್ರೆ ಮಾಡಿ, ಗುರುಗಳು ತಪಸ್ಸು ಮಾಡಿದ ಗುಹೆಯ ದರ್ಶನ ಪಡೆದು ಪುನೀತರಾದರು.
ಬೆಟ್ಟದಿಂದ ಇಳಿದು ಬೆಳಗಿನ ಉಪಹಾರ ನಂತರ, ಗುರುಗಳು ಸ್ಥಾಪಿಸಿದ ಪ್ರಪ್ರಥಮ ದೇವಸ್ಥಾನ ಅರವಿಪುರ ಶಿವಾಲಯ, ನೆಯ್ಯಾರು ನದಿ ವೀಕ್ಷಣೆ ಹಾಗೂ ಗುರುಪೂಜೆ ಸಲ್ಲಿಸಿ ಅನ್ನಪ್ರಸಾದ ಸೇವಿಸಲಾಯಿತು. ನಂತರ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಯಾತ್ರಾರ್ಥಿಗಳು, ಸಂಜೆ 6.30ಕ್ಕೆ ತಿರುವನಂತಪುರಂ ರೈಲ್ವೆ ನಿಲ್ದಾಣದಿಂದ ಮಂಗಳೂರಿಗೆ ಮರುಪ್ರಯಾಣ ಆರಂಭಿಸಿದರು. ದಿನಾಂಕ 26-01-2026 ಸೋಮವಾರ ಬೆಳಿಗ್ಗೆ 8.00 ಗಂಟೆಗೆ ಮಂಗಳೂರು ತಲುಪಿದಾಗ, ಈ ಜಗತ್ತು ಕಂಡಿರುವ ಮಹಾನ್ ದಾರ್ಶನಿಕನ ಜನ್ಮಸ್ಥಳವನ್ನು ಕಣ್ಣಾರೆ ಕಂಡ ಸಂತೋಷ ಮತ್ತು ಧನ್ಯತಾ ಭಾವ ಎಲ್ಲರ ಮುಖದಲ್ಲೂ ಸ್ಪಷ್ಟವಾಗಿ ಮೂಡಿತ್ತು.
ಈ ಯಾತ್ರೆಯು ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರ ನೇತೃತ್ವದಲ್ಲಿ, ಕೇಂದ್ರ ಸಮಿತಿಯ ಮಾಜಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಮಾಡೂರ್ ಅವರ ಮಾರ್ಗದರ್ಶನದಲ್ಲಿ, ಘಟಕದ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕಿ ಅಶ್ವಿತಾ ಹರೀಶ್ ಕುಂಪಲ ಅವರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!