Yuvavahini

JAN 31, 2026 9.00 PM IST

ಯುವವಾಹಿನಿ ಬೆಳ್ತಂಗಡಿ ಘಟಕದಿಂದ

ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು.


ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ತುರ್ತು ಚಿಕಿತ್ಸಾ ತಜ್ಞರಾದ ಡಾ. ಆದಿತ್ಯ ರಾವ್ ಅವರು CPR (ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ಪ್ರಾತ್ಯಕ್ಷಿಕೆಯ ಮೂಲಕ ಹೃದಯ ಸ್ತಂಭನ ಹಾಗೂ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸ್ಪಷ್ಟ ಮತ್ತು ಉಪಯುಕ್ತ ಮಾಹಿತಿಯನ್ನು ನೀಡಿದರು. ಸಾರ್ವಜನಿಕರಲ್ಲಿ ಜೀವ ರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಾಗಾರ ಮಹತ್ವ ಪಡೆದುಕೊಂಡಿತು.

ಕಾರ್ಯಕ್ರಮದ ಮತ್ತೊಂದು ಅರ್ಥಪೂರ್ಣ ಘಟ್ಟವಾಗಿ ಘಟಕದ ಮಾಜಿ ನಿರ್ದೇಶಕರಾದ ದಿವಂಗತ ಶಶಿಧರ ಆದೇಲು ಅವರ ಮಕ್ಕಳಿಗೆ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಮಾಡಲಾಯಿತು.
ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕರೂ ಹಾಗೂ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಕುಮಾರ್ ಮುಡುಕೋಡಿ ಅವರು ಕಾರ್ಯಕ್ರಮದ ಮಹತ್ವ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಮನೆಯ ಯಜಮಾನರಾದ ವಸಂತ ಪೂಜಾರಿ ಹಾಗೂ ಲೀಲಾವತಿ ಪನಕಜೆ ಅವರು ಆಗಮಿಸಿದ ಎಲ್ಲರನ್ನು ಪ್ರೀತಿಯಿಂದ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಆದಿತ್ಯ ರಾವ್ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗುರುರಾಜ ಗುರಿಪಳ್ಳ ವಹಿಸಿದ್ದರು. ಕಾರ್ಯದರ್ಶಿ ಮಧುರ ರಾಘವ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ಕೋಶಾಧಿಕಾರಿ ನಾಗೇಶ್ ಆದೇಲು, ಯುವವಾಹಿನಿಯ ಪದಾಧಿಕಾರಿಗಳು, ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಘಟಕದ ಸದಸ್ಯರಿಗಾಗಿ ಮನೋರಂಜನಾ ಕಾರ್ಯಕ್ರಮಗಳು ಮತ್ತು ಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!