ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ ಪಂದ್ಯಾಕೂಟವನ್ನು ಉದ್ಘಾಟಿಸಲು ಹೆಮ್ಮೆ ಪಡುತ್ತಿದ್ದೇನೆ ಎಂದು ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಗೀತಾಂಜಲಿ ಸುವರ್ಣ ಮಾತನಾಡಿ, ಯುವವಾಹಿನಿಯ ಮಹಿಳಾ ಸದಸ್ಯರ ಮುತುವರ್ಜಿಯಲ್ಲಿ ನಡೆಯುತ್ತಿರುವ ಈ ಪಂದ್ಯಾಕೂಟದ ಭಾಗವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ ಸುಧೀರ್ ಕುಮಾರ್, KRS ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಉದಯ್ ಕುಮಾರ್ ಕಟಪಾಡಿ, ಪಾದೆಬೆಟ್ಟು ಸುಬ್ರಹ್ಮಣ್ಯ ಯುವಕ ವೃಂದದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಗೌರವಾಧ್ಯಕ್ಷ ಶರತ್ ಶೆಟ್ಟಿ, ಯುವಜನ ಮತ್ತು ಕ್ರೀಡಾ ಇಲಾಖೆಯ ರಿತೇಶ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ವೈ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಮೆಂಡನ್, ದಯಾನಂದ ಹೆಜಮಾಡಿ, ಮನೋಜ್ ಸುವರ್ಣ, ಶ್ರವಣ್ ಮತ್ತಿತರರು ಉಪಸ್ಥಿತರಿದ್ದರು. ಗೌರೀಶ್ ಕಾರ್ಯಕ್ರಮ ನಿರ್ವಹಿಸಿ, ಭಾಸ್ಕರ್ ಅಂಚನ್ ವಂದಿಸಿದರು.


