Yuvavahini

FEB 04, 2026 11.00 AM IST

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣದ ಶಿಲಾನ್ಯಾಸ

ಮೂಡುಬಿದಿರೆ : ಸೇವೆಯೇ ಧರ್ಮ ಎಂಬ ತತ್ವವನ್ನು ಕಾರ್ಯರೂಪಕ್ಕೆ ತಂದು, ಯುವವಾಹಿನಿ (ರಿ.) ಮೂಡುಬಿದಿರೆ ಘಟಕವು ಮಾನವೀಯತೆಯ ಮೌಲ್ಯವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಮೂಡುಮಾರ್ನಾಡು ಗ್ರಾಮದ ಸುಮಿತ್ರಾ–ವಿಶ್ವನಾಥ್ ದಂಪತಿಯ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯನ್ನು ಮರುನಿರ್ಮಿಸಲು ಸುಮಾರು 6 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿ, ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 600 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣದ ಮೂಲಕ ಅಶಕ್ತ ಕುಟುಂಬಕ್ಕೆ ಭದ್ರ ಆಶ್ರಯ ಕಲ್ಪಿಸುವ ಸಂಕಲ್ಪವನ್ನು ಘಟಕ ಕೈಗೊಂಡಿದೆ.

ಯುವವಾಹಿನಿಯ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕರಾದ ಶಂಕರ್ ಎ. ಕೋಟ್ಯಾನ್ ಅವರು ಮಾತನಾಡಿ, ಯುವವಾಹಿನಿಯ ಸಕ್ರಿಯ ಸದಸ್ಯೆಯಾಗಿರುವ ಸುಮಿತ್ರಾ ಅವರ ಮನೆ ದುಸ್ಥಿತಿಯಲ್ಲಿರುವುದನ್ನು ಗಮನಿಸಿ ಮರುನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಮಾಜದ ಬೆಂಬಲದೊಂದಿಗೆ ಈ ಮನೆ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಕುಟುಂಬಕ್ಕೆ ಸುರಕ್ಷಿತ ನೆಲೆ ಒದಗಿಸುವುದು ನಮ್ಮ ಧ್ಯೇಯ ಎಂದು ತಿಳಿಸಿದರು.

ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಸುದೇವ ಭಟ್ ಅವರು ಪ್ರಾರ್ಥನೆ ಸಲ್ಲಿಸಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಮಾರ್ನಾಡು ಗ್ರಾ.ಪಂ.ಸದಸ್ಯರಾದ ರಮೇಶ್ ಶೆಟ್ಟಿ ಅವರು ರೂ.10,000 ಹಾಗೂ ಹಿರಿಯರಾದ ಮೋಹನ್ ಕೋಟ್ಯಾನ್ ಅವರು ರೂ.3,000 ದೇಣಿಗೆ ನೀಡಿ ಕಾರ್ಯಕ್ಕೆ ಶುಭ ಹಾರೈಸಿದರು.

ವಾಸುದೇವ ಭಟ್ ಅವರು ರೂ.5,000 ದೇಣಿಗೆ ನೀಡುವುದಾಗಿ ಘೋಷಿಸಿದರೆ, ಘಟಕದ ಗೌರವ ಸಲಹೆಗಾರ ಸುರೇಶ್ ಕೋಟ್ಯಾನ್ ಅವರು ಒಂದು ಲೋಡ್ ಜಲ್ಲಿ ಒದಗಿಸುವ ಭರವಸೆ ನೀಡಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ಅವರು ಮನೆಗೆ ಅಗತ್ಯವಿರುವ ಸಂಪೂರ್ಣ ಟೈಲ್ಸ್ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು. ಈ ಮಾನವೀಯ ಕಾರ್ಯಕ್ಕೆ ಹಲವರಿಂದ ವ್ಯಕ್ತವಾದ ಸಹಕಾರವು ಸಮಾಜದ ಒಗ್ಗಟ್ಟಿನ ಪ್ರತೀಕವಾಗಿತ್ತು.

ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳಾದ ವಿಧೇಶ್ ಎಂ., ಗಿರೀಶ್ ಕೋಟ್ಯಾನ್, ಜಯಶೀಲಾ, ಶೋಭಾ ದಿನೇಶ್, ಗುತ್ತಿಗೆದಾರ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ಕೆ ಕೈಜೋಡಿಸಿದರು. ಸೇವಾ ಮನೋಭಾವದಿಂದ ಆರಂಭವಾದ ಈ ಪ್ರಯತ್ನ, ಅಶಕ್ತ ಕುಟುಂಬದ ಬದುಕಿನಲ್ಲಿ ಹೊಸ ಬೆಳಕನ್ನು ಹರಿಸುವ ಮಹತ್ವದ ಹೆಜ್ಜೆಯಾಗಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!