Yuvavahini

FEB 07, 2026 11.00 AM IST

ಯುವವಾಹಿನಿ ಹೆಜಮಾಡಿ ಘಟಕದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ

ಜ್ಞಾನದ ಬೆಳಕಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅರಳುತ್ತದೆ : ವಿಧ್ಯಾ ರಾಕೇಶ್

ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ ಸಂಘ(ನಿ.) ಪಡುಬಿದ್ರಿ ಇದರ ಸಹಯೋಗದಲ್ಲಿ 07-02-2026ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ತಾರಾನಾಥ್ ಹೆಚ್.ಬಿ. ಅವರು ದೀಪ ಬೆಳಗುವುದರ ಮೂಲಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿದರು. ಹೆಜಮಾಡಿ ಘಟಕದ ಅಧ್ಯಕ್ಷರಾದ ನಿಶಾಂಕ್ ಎಸ್. ಕೋಟ್ಯಾನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೆಜಮಾಡಿ ಬಿಲ್ಲವರ ಸಂಘದ ಕಾರ್ಯದರ್ಶಿ ಪ್ರಬೋಧ್ ಚಂದ್ರ ಉಪಸ್ಥಿತರಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಬೋಧನಾ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಹರಿಕಾರ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟಾ ಅವರು ತರಬೇತುದಾರರಾಗಿ ಭಾಗವಹಿಸಿ, ಹೆಜಮಾಡಿ ಗ್ರಾಮದ ನಾಲ್ಕು ಶಾಲೆಗಳ 84 ವಿದ್ಯಾರ್ಥಿಗಳಿಗೆ ಎರಡು ಗಂಟೆಗಳ ಪರಿಣಾಮಕಾರಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಘಟಕದ ಸದಸ್ಯರಾದ ಧೀರಜ್ ಹೆಜಮಾಡಿ ಅವರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!