Yuvavahini

JAN 25, 2026 11.00 AM IST

ಯುವವಾಹಿನಿ (ರಿ) ಉಡುಪಿ ಘಟಕ.

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಯುವ ವಾಹಿನಿಯ ಕಾರ್ಯ ಸುತ್ಯರ್ಹ : ಬನ್ನಂಜೆ ಬಾಬು ಅಮೀನ್

ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 25-12-2026ರಂದು ಹಮ್ಮಿಕೊಂಡ ಜಿಲ್ಲಾ ಮಟ್ಟದ ನಾರಾಯಣಗುರುಗಳ ಕುರಿತಾದ ವಿವಿಧ ಸ್ಪರ್ಧೆಗಳ ‘ಗುರು ಸನ್ಮತಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾನಾಡಿದರು.


ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಶಶಿಧರ್ ಎಸ್ ಅಮೀನ್ ನಾರಾಯಣಗುರುಗಳ ಅಲುವ ಅದ್ವೈತ ಆಶ್ರಮದ ಸರ್ವಧರ್ಮ ಸಮ್ಮೇಳನದ ಆಶಯವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಘಟಕದ ಅಧ್ಯಕ್ಷರಾದ ದಯಾನಂದ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮಾಧವ ಬನ್ನಂಜೆ, ಉಡುಪಿ ಯುವವಾಹಿನಿ ರಜತ ಸಂಭ್ರಮ ಸಂಚಾಲಕರಾದ ರಘುನಾಥ್ ಮಾಬಿಯಾನ್, ಗೌರವ ಸಲಹೆಗಾರರಾದ ಶಂಕರ ಪೂಜಾರಿ, ಬನ್ನಂಜೆ ಬಿಲ್ಲವರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು. ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಅರವಿಂದ ಕೋಟ್ಯಾನ್ ಕಲ್ಲುಗುಡ್ಡೆ ಸ್ವಾಗತಿಸಿ ವಂದಿಸಿದರು. ಸಚಿನ್ ಬಡಗುಬೆಟ್ಟು ನಿರೂಪಿಸಿದರು. ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರು,ಸದಸ್ಯರು ಹಾಗೂ ಬನ್ನಂಜೆ ಬಿಲ್ಲವರ ಸೇವಾ ಸಂಘದ ಆಡಳಿತ ಸಮಿತಿ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಸಮುದಾಯದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು 25 ವಿವಿಧ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!