
ಪಡುಬಿದ್ರಿ : ದಿನಾಂಕ 08/02/2026 ರಂದು ಶ್ರೀ ಸಾರಂತಾಯ ಗರೋಡಿ ಉಲ್ಲಾಯ ದೈವಸ್ಥಾನ, ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ನೆರೆದಿದ್ದ ಭಕ್ತಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಘಟಕದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ಒಪ್ಪಿಸಲಾಯಿತು.


