Yuvavahini

JAN 24, 2026 10.00 PM IST

ಯುವವಾಹಿನಿ (ರಿ.) ಬಜಪೆ ಘಟಕ

ವಿದ್ಯಾನಿಧಿ ಬಲವರ್ಧನೆಗೆ ಬಜಪೆಯಲ್ಲಿ ‘ಪೊರಿಪುದಪ್ಪೆ ಜಲದುರ್ಗೆ’ ತುಳು ನಾಟಕದ ಯಶಸ್ವಿ ಪ್ರದರ್ಶನ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು.

ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ಇದರ ಅಧ್ಯಕ್ಷರಾದ ಶಿವರಾಮ್ ಪೂಜಾರಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ನ ಪ್ರಪ್ರಥಮ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಪೂಜಾರಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ವಿದ್ಯಾನಿಧಿಗೆ ಧನ ಸಹಾಯದ ಮೂಲಕ ಕೈಜೋಡಿಸಿದ ದಾನಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷರಾದ ರೇಣುಕಾ ಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶರ್ಮಿಳಾ ಚಂದ್ರಶೇಖರ್ ಧನ್ಯವಾದ ಸಮರ್ಪಿಸಿದರು. ಡಾ. ಶಿಲ್ಪಾ ದಿನೇಶ್ ಮತ್ತು ಚಂದ್ರಶೇಖರ್ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!