Yuvavahini

FEB 12, 2026 9.00 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕದ ಗುರುತತ್ವವಾಹಿನಿ 67ನೇ ಮಾಲಿಕೆ

ನಾರಾಯಣಗುರುಗಳು ಸಾರಿದ ಸಮಾನತೆ ಮತ್ತು ಮಾನವತೆಯ ಮೂಲಕ ಸಮಾಜ ಬಲಿಷ್ಠವಾಗಲಿ

ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು.

ಅವರು ಫೆಬ್ರವರಿ 12ರಂದು ಸಿದ್ದಕಟ್ಟೆ ಕರ್ಪೆ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 67 ರ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ ನೀಡಿದರು

ಈ ಸಂದರ್ಭದಲ್ಲಿ ಕುಪ್ಪೆಟ್ಟು ಪಂಜರ್ಲಿ ಮೂಲಸ್ಥಾನ ಸಮಿತಿ ಅಧ್ಯಕ್ಷರಾದ ಹರೀಶ್ ಸನಿಲ್, ಸಿದ್ಧಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಮಹಿಳಾ ಅಧ್ಯಕ್ಷೆ ರಂಜಿನಿ ದಿವಾಕರ್, ಬಿಲ್ಲವ ಮಹಿಳಾ ಅಧ್ಯಕ್ಷೆ ಅನುರಾಧ ಜಾನುಗುರಿ, ಜಯ ಪೂಜಾರಿ, ಯುವವಾಹಿನಿ ಬಂಟ್ವಾಳ ಘಟಕದ ಕ್ರೀಡಾ ನಿರ್ದೇಶಕರಾದ ಧನುಷ್ ಮಧ್ವ, ಸಂಘಟನಾ ಕಾರ್ಯದರ್ಶಿ ಯಶೋಧರ ಕಡಂಬಲಿಕೆ , ಸದಸ್ಯರಾದ ರತ್ನಾಕರ ಪೂಜಾರಿ ಸಿದ್ದಕಟ್ಟೆ ದೇವಪ್ಪ ಪೂಜಾರಿ ಕರ್ಪೆ ಪ್ರಶಾಂತ್ ಏರಮಲೆ , ಯತೀಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ದಿನೇಶ್ ಸುವರ್ಣ ರಾಯಿ ಮತ್ತಿತರರು ಉಪಸ್ಥಿತರಿದ್ದರು. ಸಂಗೀತದಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ. ವಿನಯ ಆಚಾರ್ಯ ಸಹಕರಿಸಿದರು

ಯುವವಾಹಿನಿ ಬಂಟ್ವಾಳ ಘಟಕದ ಸಮಾಜ ಸೇವಾ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!