Yuvavahini

FEB 13, 2026 8.24 PM IST

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು.

“ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿಯ 38 ವರ್ಷಗಳ ಸಾಧನೆಯನ್ನು ಒಳಗೊಂಡ ಕಿರು ಹೊತ್ತಗೆಯನ್ನು ಇದೇ ಸಂದರ್ಭದಲ್ಲಿ ಅವರಿಗೆ ಹಸ್ತಾಂತರಿಸಲಾಯಿತು.

ಸಮಾಜದಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವುದು, ಅವರಲ್ಲಿ ಆತ್ಮವಿಶ್ವಾಸ ಮತ್ತು ಸಬಲೀಕರಣದ ಮನೋಭಾವ ಬೆಳೆಸುವುದು ಎಂಬ ಉದ್ದೇಶದಿಂದ “ಸಖೀ ಸಂವಾದ” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ ಪಿ ಎಲ್ ಧರ್ಮ ಅವರೊಂದಿಗೆ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಅದೇ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ ಧರ್ಮ ಅವರೊಂದಿಗೆ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಎಸಿಪಿ ಗೀತಾ ಕುಲಕರ್ಣಿ ಅವರನ್ನು ಸಖೀ ಸಂವಾದದ ಸ್ತ್ರೀ ಹಕ್ಕುಗಳ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಅಧಿಕೃತ ಆಹ್ವಾನ ನೀಡಲಾಯಿತು.

ಎಸಿಪಿ ಗೀತಾ ಕುಲಕರ್ಣಿ ಅವರನ್ನು ಸಖೀ ಸಂವಾದದ ಸ್ತ್ರೀ ಹಕ್ಕುಗಳ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಅಧಿಕೃತ ಆಹ್ವಾನ ನೀಡಲಾಯಿತು.

ಈ ಆಹ್ವಾನ ಭೇಟಿಯು ಸಂಘಟನೆಯ ಒಗ್ಗಟ್ಟು ಮತ್ತು ಮಹಿಳಾ ಗೌರವದ ಬದ್ಧತೆಯನ್ನು ಪ್ರತಿಬಿಂಬಿಸುವ ಕ್ಷಣವಾಗಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್, ಸಾಮಾಜಿಕ ಜಾಲತಾಣ ಸಂಪಾದಕರಾದ ರಾಜೇಶ್ ಸುವರ್ಣ ಹಾಗೂ ಕೊಲ್ಯ ಘಟಕದ ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿಲ್ಲವ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!