Yuvavahini

FEB 17, 2026 9.11 PM IST

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಐಎಎಸ್ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು

ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಜಿಲ್ಲಾಧಿಕಾರಿ ಅವರಿಗೆ ವಿವರಿಸಲಾಯಿತು. ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿಯ 38 ವರ್ಷಗಳ ಸಾಧನೆಯನ್ನು ಒಳಗೊಂಡ ಕಿರು ಹೊತ್ತಗೆಯನ್ನು ಇದೇ ಸಂದರ್ಭದಲ್ಲಿ ಅವರಿಗೆ ಹಸ್ತಾಂತರಿಸಲಾಯಿತು.

ಸಮಾಜದಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವುದು, ಅವರಲ್ಲಿ ಆತ್ಮವಿಶ್ವಾಸ ಮತ್ತು ಸಬಲೀಕರಣದ ಮನೋಭಾವ ಬೆಳೆಸುವುದು ಎಂಬ ಉದ್ದೇಶದಿಂದ “ಸಖೀ ಸಂವಾದ” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ತಿಳಿಸಿದರು.

ಈ ಆಹ್ವಾನ ಭೇಟಿಯು ಸಂಘಟನೆಯ ಒಗ್ಗಟ್ಟು ಮತ್ತು ಮಹಿಳಾ ಗೌರವದ ಬದ್ಧತೆಯನ್ನು ಪ್ರತಿಬಿಂಬಿಸುವ ಕ್ಷಣವಾಗಿತ್ತು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಪ್ರಥಮ ಉಪಾಧ್ಯಕ್ಷರು ವಿದ್ಯಾ ರಾಕೇಶ್, ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್, ಸಾಮಾಜಿಕ ಜಾಲತಾಣ ಸಂಪಾದಕರಾದ ರಾಜೇಶ್ ಸುವರ್ಣ, ಯುವವಾಹಿನಿ ಕಟ್ಟಡ ಸಮಿತಿಯ ಸಂಚಾಲಕರಾದ ಹರೀಶ್ ಕೆ ಪೂಜಾರಿ ಹಾಗೂ ಕೊಲ್ಯ ಘಟಕದ ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿಲ್ಲವ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!