Yuvavahini

FEB 15, 2026 10.30 AM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಆಶ್ರಯದಲ್ಲಿ

ಯುವ ಸಂದೇಶ–2026 : ರಸ್ತೆ ಸುರಕ್ಷತಾ ಜಾಥಾ ಯಶಸ್ವಿ

ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 ರಂದು ಆಯೋಜಿಸಲಾದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ “ಯುವ ಸಂದೇಶ–2026” ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಉಪ್ಪಿನಂಗಡಿ ಆರಕ್ಷಕ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೌಶಿಕ್ ಬಿ.ಸಿ., ಯುವವಾಹಿನಿ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಆಶ್ಫಾನ್ ಬಿ.ಎಸ್. ಅವರು ಕಲ್ಲೇರಿಯಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಚಾರ ನಿಯಮಗಳು ಜನರ ಸುರಕ್ಷತಿಗಾಗಿ ರೂಪುಗೊಂಡಿವೆ. ಅವುಗಳನ್ನು ಗೌರವಿಸಿ ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬಹುದು. ನಿಯಮಗಳ ಉಲ್ಲಂಘನೆ ಆತ್ಮಹತ್ಯೆ ಪ್ರಯತ್ನಕ್ಕೆ ಸಮಾನವಾಗಿದ್ದು, ಆಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ನಮ್ಮ ಮಕ್ಕಳನ್ನು ತೊಂದರೆಗೆ ತಳ್ಳಿದಂತೆಯೇ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಜಾನ್ ಕೆನ್ಯೂಟ್ ಶುಭ ಹಾರೈಕೆ ಮಾಡಿದರು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಅಜಿತ್ ಕುಮಾರ್ ಪಾಲೇರಿ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ಡಾ. ರಮ್ಯರಾಜಾರಾಮ್, ದೇವಿದಾಸ್ ರೈ, ದೇವಸ್ಥಾನದ ಸಿಬ್ಬಂದಿ ವರ್ಗ, ಜೆಸಿಐ ಅಧ್ಯಕ್ಷರಾದ ಅನೀಶ್ ಭಟ್, ಕರಾಯ ಕೋಟಿ ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷರಾದ ದುರ್ಗಾ ಪ್ರಸಾದ್, ಪೆರಿಯೊಟ್ಟು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸತೀಶ್ ಪಿಲಿಗೂಡು, ಜಯಂತ್ ಶೆಟ್ಟಿ ಸುಣ್ಣಾಜೆ, ಉಪ್ಪಿನಂಗಡಿ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ಸಂಜೀವ ಗೌಡ, ಶ್ರೀ ರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ಯು.ಜಿ. ರಾಧಾ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಸಾಮಾಜಿಕ ಮುಂದಾಳುಗಳಾದ ಉಷಾ ಶರತ್, ಕೈಲಾರ್ ರಾಜಗೋಪಾಲ್ ಭಟ್, ಜಯಂತ್ ಪುರೋಳಿ, ವಿದ್ಯಾಧರ್ ಜೈನ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಗೌರವ ಸಲಹೆಗಾರರಾದ ವರದರಾಜ್ ಎಂ., ಕರುಣಾಕರ ಸುವರ್ಣ, ಮಾಜಿ ಅಧ್ಯಕ್ಷರಾದ ಜಯವಿಕ್ರಂ ಕಲ್ಲಾಪು, ಗುಣಕರ ಅಗ್ನಾಡಿ, ಡಾ. ಆಶಿತ್ ಎಂ.ವಿ., ಡೀಕಯ್ಯ ಗೌಂಡತ್ತಿಗೆ, ಕುಶಾಲಪ್ಪ ಪೂಜಾರಿ ಹತ್ತು ಕಳಸೆ, ಸೋಮ ಸುಂದರ್ ಕೊಡಿಪಾನ, ನಾಣ್ಯಪ್ಪ ಕೋಟ್ಯಾನ್ ಹಾಗೂ ಜಂಟಿ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಸಾಂತ್ಯ ವಂದಿಸಿದರು. ಘಟಕದ ಅಂಕಿತ್ ಎಂ.ಜೆ., ಸದಾಶಿವ ಬಂಗೇರ ಎಲಿಯ, ಸಂತೋಷ್ ಕುಮಾರ್, ಪುನೀತ್ ವಿ.ಡಿ., ಸುರೇಶ್ ಶಿಬಾರ್ಲ, ಲಿಖಿತ್ ಎಂ.ಜಿ., ಮನೋಹರ್ ಬಿಳಿಯೂರು, ವಸಂತ ಕುಂಡಾಪು, ಬಿ.ಕೆ. ಮಾಧವ, ಕುಶಾಲಪ್ಪ ಸುಣ್ಣಾಜೆ, ಸಂದೇಶ್ ಬೇಂಗಿಲ ಹಾಗೂ ರೋಟರಿ ಕ್ಲಬ್‌ನ ಶ್ರೀಕಾಂತ್ ಪಟೇಲ್, ನಾಗೇಶ್ ಪ್ರಭು ಅವರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!