Yuvavahini

FEB 19, 2026 9.30 AM IST

ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಆಮಂತ್ರಣ ಬಿಡುಗಡೆ

ರಜತ ಸಂಭ್ರಮ ಯಶಸ್ವಿಯಾಗಲಿದೆ : ಬಿ.ಜನಾರ್ದನ ಪೂಜಾರಿ

ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು ಶ್ಲಾಘನೀಯ ಎಂದರು. ರಜತ ಸಂಭ್ರಮ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಯಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ದಯಾನಂದ ಕರ್ಕೇರ ಉಪ್ಪೂರು, ರಜತ ಸಂಭ್ರಮ ಸಂಚಾಲಕರಾದ ರಘುನಾಥ ಮಾಬಿಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಸಾಮಾಜಿಕ ಜಾಲತಾಣ ಸಂಪಾದಕರಾದ ರಾಜೇಶ್ ಸುವರ್ಣ ಹಾಗೂ ಉಡುಪಿ ಘಟಕದ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಸುವರ್ಣ, ದಯಾನಂದ ಪೂಜಾರಿ, ನಾರಾಯಣ ಬಿಎಸ್, ಜಗದೀಶ್ ಕುಮಾರ್ ಉಪಸ್ಥಿತರಿದ್ದರು.

ರಜತ ಸಂಭ್ರಮ ಸಮಾರಂಭವು ಯುವವಾಹಿನಿಯ ಸೇವಾ ಪಥದ ಮಹತ್ವದ ಮೈಲುಗಲ್ಲಾಗಿ ಗುರುತಿಸಿಕೊಳ್ಳಲಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!