ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.

ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ ಮಂಡಳಿಯಿಂದ ಪ್ರಶಂಸೆಗೆ ಪಾತ್ರರಾದರು. ಸಮಾಜ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾಭಾವದಿಂದ ಕಾರ್ಯನಿರ್ವಹಿಸುವುದು ಯುವವಾಹಿನಿಯ ಧ್ಯೇಯವಾಗಿದ್ದು, ಮುಂದೆಯೂ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಘಟಕದ ಪದಾಧಿಕಾರಿಗಳು ತಿಳಿಸಿದರು


