Yuvavahini

JUL 10, 2016 7.36 AM IST

ಯುವವಾಹಿನಿ(ರಿ) ಅಡ್ವೆ ಘಟಕ

ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ 7ನೇ, 10ನೇ ತರಗತಿ ಹಾಗೂ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು.

ದಿನಾಂಕ 17-7-2016 ರಂದು ಘಟಕದ ಜಂಟಿ ಸಭೆ ನಡೆದು ಅಧಿಕಾರ ಹಸ್ತಾಂತರ ಮಾಡಲಾಯಿತು. ನಂತರ ಮುಂದಿನ ವರ್ಷದ ಕಾರ್ಯಕ್ರಮಗಳ ಪಟ್ಟಿ ಮಾಡಲಾಯಿತು. ಅಲ್ಲದೆ ಈ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದ ರೂಪುರೇಷೆ ಹಾಕಲಾಯಿತು. ಅಲ್ಲದೇ ಉಡುಪಿಯಲ್ಲಿ ನಡೆಯುವ ೨೯ನೇ ವರ್ಷದ ಸಮಾವೇಶಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಯಿತು. ಧನ್ಯವಾದದೊಂದಿಗೆ ಸಭೆ ಮುಕ್ತಾಯವಾಯಿತು.

ಅಭಿನಂದನೆ
ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಕಡಂಬಳಿಕೆ, ಕಾರ್ಯದರ್ಶಿ ಸುಲತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!