Yuvavahini

FEB 21, 2026 12.42 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಕುದ್ರೋಳಿ ತೀರ್ಥಾಟನೆ: ಯುವವಾಹಿನಿ ಮಂಗಳೂರು ಘಟಕದಿಂದ ಭಕ್ತಿಪೂರ್ವಕ ಸಹಭಾಗಿತ್ವ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಕುದ್ರೋಳಿ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಅತ್ಯಂತ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.


ದಿನಾಂಕ 21-02-2026ರಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಆರಂಭಗೊಂಡ ಈ ಭವ್ಯ ಯಾತ್ರೆಯುದ್ದಕ್ಕೂ ಗುರುಗಳ ಜ್ಞಾನದ ಸಂಕೇತವಾದ ಹಳದಿ ವರ್ಣದ ಬಾವುಟ ಹಾಗೂ ವಸ್ತ್ರಧಾರಿ ಭಕ್ತರಿಂದ ಇಡೀ ಪರಿಸರವು ಹಳದಿಮಯವಾಗಿ ಕಂಗೊಳಿಸುತ್ತಿತ್ತು. “ಓಂ ಶ್ರೀ ನಾರಾಯಣ ಪರಮ ಗುರುವೇ ನಮಃ” ಎಂಬ ಮಂತ್ರೋಚ್ಛಾರಣೆಯು ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ತುಂಬಿತು.
​ಕ್ಷೇತ್ರಾಡಳಿತ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ನಾರಾಯಣಗುರು ಅನುಯಾಯಿ ಸಂಘಗಳ ಅಭೂತಪೂರ್ವ ಒಗ್ಗಟ್ಟು ಈ ಸಂದರ್ಭದಲ್ಲಿ ಎದ್ದು ಕಾಣುತ್ತಿತ್ತು. “ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು” ಎಂಬ ಗುರುಗಳ ಸಾರ್ವಕಾಲಿಕ ಸಂದೇಶವನ್ನು ಸಾರುತ್ತಾ ಸಾಗಿದ ಈ ಭಕ್ತಸಂದಣಿಯು ಸಮಾಜದ ಜಾಗೃತಿಯ ಸಂಕಲ್ಪವನ್ನು ಮೆರೆಯಿತು.
​ಈ ಪುಣ್ಯ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಭಾಗವಹಿಸಿ ಗುರುವಿನ ಕೃಪೆಗೆ ಪಾತ್ರರಾದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!