Yuvavahini

FEB 26, 2026 9.00 PM IST

ಯುವವಾಹಿನಿ ಬಂಟ್ವಾಳ ಘಟಕದ 'ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68'

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದರ್ಶನ ಸಮಾನತೆಯ ಸಮಾಜಕ್ಕೆ ಮುನ್ನುಡಿ: ಮಧುಸೂದನ್ ಸುವರ್ಣ

ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು.

​ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದ ಗುರುಗಳು, “ಜಾತಿ ಒಂದೇ, ಮತ ಒಂದೇ, ದೇವರು ಒಬ್ಬನೇ” ಎಂಬ ಮಾನವತಾವಾದದ ಮೂಲಕ ಕ್ರಾಂತಿ ಮಾಡಿದರು. ಅಸ್ಪೃಶ್ಯತೆ ಮತ್ತು ಅಂಧಶ್ರದ್ಧೆಗಳನ್ನು ತೊಡೆದುಹಾಕಲು ಅವರು ನಡೆಸಿದ ಈ ತ್ರಿವಿಧ ಕ್ರಾಂತಿಯು ಇಂದಿಗೂ ಮನುಕುಲದ ಏಳಿಗೆಗೆ ದಾರಿದೀಪವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ l ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಹಾಗೂ ಸಲಹೆಗಾರರಾದ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರು ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು.
​ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ರಂಜಿತ್ ಪೂಜಾರಿ ದಂಪತಿಗಳು ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ಅರ್ಪಿಸಿದರು. ಸಮಾಜ ಸೇವಾ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!